ಮಂಗಳವಾರ, ಆಗಸ್ಟ್ 9, 2022
23 °C

ಇಪಿಎಸ್ ಬಣಕ್ಕೆ ಜನ ಶಿಕ್ಷಿಸಲಿದ್ದಾರೆ: ಪನ್ನೀರ್‌ ಸೆಲ್ವಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮದುರೈ: ತಮಿಳುನಾಡಿನ ಪ್ರತಿಪಕ್ಷ ಎಐಎಡಿಎಂಕೆಯಲ್ಲಿ ಬಣ ರಾಜಕೀಯ ಮತ್ತೆ ಭುಗಿಲೆದ್ದಿದೆ. ತಮ್ಮ ವಿರೋಧಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಬಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಎಐಎಡಿಎಂಕೆ ಮುಖಂಡ ಒ.ಪನ್ನೀರ್‌ ಸೆಲ್ವಂ ಅವರು, ಪಕ್ಷದ ಕಾರ್ಯಕರ್ತರು ತಮ್ಮ ಪರವಾಗಿದ್ದು, ಜನತೆ ಮತ್ತು ಪಕ್ಷದ ಕಾರ್ಯಕರ್ತರು ವಿರೋಧಿಗಳಿಗೆ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ. 

ತಮ್ಮ ತವರು ಜಿಲ್ಲೆ ಥೇಣಿಗೆ ತೆರಳುವ ಮಾರ್ಗ ಮಧ್ಯೆ ಭಾನುವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು, ‘ಪಕ್ಷದಲ್ಲಿ ಇಂದಿನ ಸ್ಥಿತಿಗೆ ಕಾರಣವಾಗಿರುವವರಿಗೆ ಜನತೆ ಮತ್ತು ಪಕ್ಷದ ಕಾರ್ಯಕರ್ತರು ಸರಿಯಾದ ಪಾಠವನ್ನು ಕಲಿಸಲಿದ್ದಾರೆ. ಅವರನ್ನು ಜನತೆ ಶಿಕ್ಷಿಸಲಿದ್ದಾರೆ’ ಎಂದರು.

ಜುಲೈ 11ರಂದು ಮತ್ತೆ ನಡೆಯಲಿರುವ ಪಕ್ಷದ ಸಾಮಾನ್ಯ ಮಂಡಳಿ ಸಭೆಯಲ್ಲಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನು ಪಕ್ಷದ ಪರಮೋಚ್ಛ ನಾಯಕನನ್ನಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಎಐಎಡಿಎಂಕೆ ತಿಳಿಸಿದೆ. ಪಕ್ಷದ ಇಬ್ಬರು ಪ್ರಬಲ ನಾಯಕರಾದ ಇಪಿಎಸ್ ಮತ್ತು ಒಪಿಎಸ್ ಬಣಗಳು ಪರಸ್ಪರ ಕಿತ್ತಾಡುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು