ಲಖನೌ: ಉತ್ತರ ಪ್ರದೇಶದ ಬಗ್ಗೆ ಜನರಲ್ಲಿದ್ದ 'ಮಾಫಿಯಾ ಮತ್ತು ಗೂಂಡಾ ರಾಜ್' ಗ್ರಹಿಕೆ ಬಿಜೆಪಿಯ ಆರು ವರ್ಷಗಳ ಆಡಳಿತದಲ್ಲಿ ಬದಲಾಗಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಶನಿವಾರ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಸತತ ಎರಡನೇ ಬಾರಿಗೆ ರಚನೆಯಾಗಿದೆ. ಎರಡನೇ ಅವಧಿಯ ಸರ್ಕಾರ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಿಎಂ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿಗಳಾದ ಕೇಶವ್ ಪ್ರಸಾದ್ ಮೌರ್ಯ, ಬ್ರಜೇಶ್ ಪಾಠಕ್ ಹಾಗೂ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಭೂಪೇಂದ್ರ ಚೌಧರಿ ಮತ್ತಿತರರು ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಯೋಗಿ, 'ಉತ್ತರ ಪ್ರದೇಶ ಇಂದು ಮಹೋತ್ಸವಗಳ ಮೂಲಕ ಖ್ಯಾತಿ ಗಳಿಸಿದೆ. ಮಾಫಿಯಾದಿಂದ ಅಲ್ಲ. ಅಧಿಕಾರಿಗಳು ಸಮಾಜದ ಎಲ್ಲ ವರ್ಗಗಳ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ತಲುಪಿಸುತ್ತಿದ್ದಾರೆ' ಎಂದಿದ್ದಾರೆ.
ರಾಜ್ಯವು ಡಬಲ್ ಎಂಜಿನ್ ಸರ್ಕಾರಗಳ ನೇತೃತ್ವದಲ್ಲಿ ಎಲ್ಲ ರಂಗದಲ್ಲಿಯೂ ಅಭಿವೃದ್ಧಿ ಸಾಧಿಸುತ್ತಿದೆ ಎಂದೂ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಸತತವಾಗಿ ಹೆಚ್ಚು ವರ್ಷ ಅಧಿಕಾರದಲ್ಲಿದ್ದ ಮುಖ್ಯಮಂತ್ರಿ ಎಂಬ ಖ್ಯಾತಿ ಯೋಗಿ ಆದಿತ್ಯನಾಥ ಅವರದ್ದಾಗಿದೆ. ಶುಕ್ರವಾರ ವಾರಾಣಸಿಯಲ್ಲಿ ನಡೆದ ಸಮಾರಂಭದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಅಭಿನಂದಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.