ನವದೆಹಲಿ: ಆರ್‌ಜೆಡಿ ಸಂಸದ ಮನೋಜ್ ಝಾ ಅವರಿಗೆ ಪಾಕಿಸ್ತಾನಕ್ಕೆ ಭೇಟಿ ನೀಡಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದರೂ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅವಕಾಶ ನಿರಾಕರಿಸಿದೆ.

ಅಕ್ಟೋಬರ್ 22 ಮತ್ತು 23ರಂದು ನಡೆಯಲಿರುವ 4ನೇ ಅಸ್ಮಾ ಜಹಾಂಗೀರ್ ಸಮಾವೇಶದಲ್ಲಿ ಪಾಲ್ಗೊಂಡು ಭಾಷಣ ಮಾಡಲು ಮನೋಜ್ ಅವರನ್ನು ಪಾಕಿಸ್ತಾನದ ಅಸ್ಮಾ ಜಹಾಂಗೀರ್ ಫೌಂಡೇಶನ್, ಅಲ್ಲಿನ ಸುಪ್ರೀಂ ಕೋರ್ಟ್ ವಕೀಲರ ಸಂಘ ಹಾಗೂ ಇತರ ಸಂಘಟನೆಗಳು ಆಹ್ವಾನಿಸಿದ್ದವು.

ಪಾಕಿಸ್ತಾನಕ್ಕೆ ತೆರಳಲು ಅನುಮತಿ ಕೋರಿ ಮನೋಜ್ ಅವರು ಗೃಹ ಸಚಿವಾಲಯ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯಗಳಿಗೆ ಅರ್ಜಿ ಸಲ್ಲಿಸಿದ್ದರು.

‘ಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ಹೋರಾಟ ನಡೆಸಿರುವ ಅಸ್ಮಾ ಜಹಾಂಗೀರ್ ಅವರ ಹೆಸರಿನಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲು ಅನುಮತಿ ನಿರಾಕರಿಸಿರುವುದು ದುರಾದೃಷ್ಟಕರ’ ಎಂದು ಮನೋಜ್ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.