ಹೈದರಾಬಾದ್: ಹೋಳಿ ಹಬ್ಬದ ಪ್ರಯುಕ್ತ ಬಣ್ಣ ಹಚ್ಚಿದ್ದಕ್ಕೆ ಕೋಪಗೊಂಡ ವ್ಯಕ್ತಿ, ಬಣ್ಣ ಹಾಕಿದ ವ್ಯಕ್ತಿಗೆ ಬೆಂಕಿ ಹಚ್ಚಿರುವ ಭೀಕರ ಘಟನೆ ತೆಲಂಗಾಣದ ಮೇಧಕ್ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ರೇಗೋಡು ಮಂಡಲದ ಮಾರ್ಪಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೋಳಿ ಆಚರಣೆ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ.
ತನಗೆ ಬಣ್ಣ ಹಚ್ಚಬೇಡ ಎಂದು ಹೇಳಿದರೂ ವ್ಯಕ್ತಿ ಬಣ್ಣ ಹಚ್ಚಿದ್ದಾನೆ. ಇದರಿಂದ ಕೋಪಗೊಂಡ ವ್ಯಕ್ತಿಯು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಸಂತ್ರಸ್ತನಿಗೆ ತೀವ್ರ ಸುಟ್ಟ ಗಾಯಗಳಾಗಿವೆ.
ಗಾಯಗೊಂಡ ವ್ಯಕ್ತಿಯನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.