ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇರೆ ದೇಶಗಳಿಗಿಂತ ಭಾರತದಲ್ಲಿ ಪೆಟ್ರೋಲ್‌ ದರ ಕಡಿಮೆ ಇದೆ: ಸಚಿವ ಹರ್ದೀಪ್ ಪುರಿ

ಲೋಕಸಭೆಗೆ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್ ಪುರಿ ಉತ್ತರ
Last Updated 16 ಡಿಸೆಂಬರ್ 2022, 1:30 IST
ಅಕ್ಷರ ಗಾತ್ರ

ನವದೆಹಲಿ: ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್‌ ದರ ಕಡಿಮೆ ಇದೆ ಎಂದು ಕೇಂದ್ರ ಪೆಟ್ರೋಲಿಯಂ ಸಚಿವ ಹರ್ದೀಪ್‌ ಸಿಂಗ್‌ ಪುರಿ ಹೇಳಿದ್ದಾರೆ.

ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ, ಸದಸ್ಯರೊಬ್ಬರು ಕೇಳಿದ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಜಾಗತಿಕ ಪರಿಸ್ಥಿತಿ ಹಾಗೂ ಅಂತರರಾಷ್ಟ್ರೀಯ ಕಚ್ಚಾ ತೈಲದ ಬೆಲೆ ಏರಿಕೆಯ ಹೊರತಾಗಿಯೂ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ, ಬೇರೆ ದೇಶಗಳಿಗೆ ಹೋಲಿಕೆ ಮಾಡಿದರೆ ಕಡಿಮೆ ಇದೆ ಎಂದಿದ್ದಾರೆ.

ಅಲ್ಲದೇ 2021 ಹಾಗೂ 2022ರ ಅವಧಿಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಗಣನೀಯವಾಗಿ ಏರಿಕೆಯಾದದೂ, ಭಾರತದಲ್ಲಿ ಕೇವಲ ಶೇ 2 ರಷ್ಟು ಮಾತ್ರ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕ ಇಳಿಕೆ ಮಾಡಿದ ಬಳಿಕ ಹಲವು ರಾಜ್ಯಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ವ್ಯಾಟ್‌ ಇಳಿಕೆ ಮಾಡಿದೆ. ವಿಪಕ್ಷಗಳ ಆಡಳಿತ ಇರುವ ರಾಜ್ಯಗಳಲ್ಲಿ ಬೆಲೆ ಇಳಿಕೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.

ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆ ನ್ಯಾಯಯುತವಾಗಿರಬೇಕು ಎಂದು ಕೇಂದ್ರ ಸರ್ಕಾರ ಬಯಸುತ್ತದೆ. ಇದೇ ಕಾರಕ್ಕೆ 2021ರ ನವೆಂಬರ್‌ ಹಾಗೂ 2022ರ ಮೇ ತಿಂಗಳಿನಲ್ಲಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ ಎಂದಿದ್ದಾರೆ.

‘ಕೆಲವೊಂದು ರಾಜ್ಯಗಳು ಪೆಟ್ರೋಲ್‌ ಹಾಗೂ ಡೀಸೆಲ್‌ ಮೇಲಿನ ವ್ಯಾಟ್‌ ಅನ್ನು ಕಡಿತಗೊಳಿಸಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳು ಮಾತ್ರವಲ್ಲದೇ, ಇನ್ನೆರಡು ರಾಜ್ಯಗಳೂ ಕೂಡ ವ್ಯಾಟ್ ಇಳಿಕೆ ಮಾಡಿದೆ. ಕೆಲವೊಂದು ರಾಜ್ಯಗಳು ₹ 17 ವ್ಯಾಟ್‌ ವಿಧಿಸುತ್ತಿದ್ದರೆ, ಬಿಜೆಪಿಯೇತರ ರಾಜ್ಯಗಳಲ್ಲಿ ₹ 32 ಇದೆ‘ ಎಂದು ಪುರಿ ನುಡಿದಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT