ಸೋಮವಾರ, ಅಕ್ಟೋಬರ್ 26, 2020
25 °C

ಮೋದಿ ಸರ್ಕಾರ ಜನರನ್ನು ಲೂಟಿ ಮಾಡುತ್ತಿದೆ: ರಾಹುಲ್ ಗಾಂಧಿ ಟೀಕೆ

ಪಿಟಿಐ Updated:

ಅಕ್ಷರ ಗಾತ್ರ : | |

Rahul Gandhi

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಟು ಟೀಕೆ ವ್ಯಕ್ತಪಡಿಸಿದ್ದಾರೆ.

ಸತತ ಆರನೇ ದಿನ ಪೆಟ್ರೋಲ್ ಬೆಲೆ ಏರಿಕೆಯಾಗಿರುವ ಬಗ್ಗೆ ಮಂಗಳವಾರ ಮಾಧ್ಯಮವೊಂದರಲ್ಲಿ ಪ್ರಕಟವಾದ ವರದಿಯನ್ನು ಉಲ್ಲೇಖಿಸಿ ಅವರು ಟ್ವೀಟ್ ಮಾಡಿದ್ದಾರೆ. ‘ದುಬಾರಿ ಪೆಟ್ರೋಲ್ ಮತ್ತು ಬೆಲೆ ಏರಿಕೆ ಮೂಲಕ ಸರ್ಕಾರವು ಜನರನ್ನು ಲೂಟಿ ಮಾಡುತ್ತಿದೆ’ ಎಂದು ಟ್ವೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕತೆಯನ್ನು ಸಮರ್ಪಕವಾಗಿ ನಿಭಾಯಿಸುತ್ತಿಲ್ಲ ಎಂದು ರಾಹುಲ್ ಗಾಂಧಿ ಇತ್ತೀಚಿನ ದಿನಗಳಲ್ಲಿ ಟೀಕಿಸುತ್ತಲೇ ಇದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು