ಶುಕ್ರವಾರ, ಜುಲೈ 1, 2022
28 °C

ಪ್ರಜೆಗಳು ನರಳುತ್ತಿರುವಾಗ ಅರಮನೆ ಕಟ್ಟಲು ರಾಜನಿಂದ ತಯಾರಿ ನಡೆದಿದೆ: ರಾಹುಲ್‌

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕಳೆದ ಐದು ದಿನಗಳಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಂಡುಬಂದಿದೆ. ಈ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. 

ಸತತವಾಗಿ ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದಾಗಿ ಜನರು ಪರಿತಪಿಸುತ್ತಿದ್ದಾರೆ ಎಂದು ರಾಹುಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, ‘ಅರಮನೆ ನಿರ್ಮಿಸಲು ರಾಜ ತಯಾರಿ ನಡೆಸುತ್ತಿದ್ದಾನೆ. ಆದರೆ, ಪ್ರಜೆಗಳು ಮಾತ್ರ ಹಣದುಬ್ಬರದಿಂದ ಪರಿತಪಿಸುತ್ತಿದ್ದಾರೆ’ ಎಂದು ಟೀಕಿಸಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಶನಿವಾರ ಲೀಟರ್‌ಗೆ ತಲಾ 80 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ ಐದು ದಿನಗಳಲ್ಲಿ ನಾಲ್ಕನೇ ಬಾರಿಗೆ ದರ ಏರಿಕೆಯಾಗಿದೆ. ಈ ಹಿಂದೆ ಮಂಗಳವಾರ, ಬುಧವಾರ ಮತ್ತು ಶುಕ್ರವಾರ ದರ ಏರಿಸಲಾಗಿತ್ತು.

ದೆಹಲಿಯಲ್ಲಿ ಈಗ ಪ್ರತಿ ಲೀಟರ್‌ ಪೆಟ್ರೋಲ್‌ ದರ ₹ 98.61 ಮತ್ತು ಡೀಸೆಲ್‌ ದರ ₹ 89.87 ತಲುಪಿದೆ. ಸುಮಾರು ನಾಲ್ಕೂವರೆ ತಿಂಗಳ ಅಂತರದ ಬಳಿಕ ಮಾರ್ಚ್‌ 22ರಿಂದ ಪೆಟ್ರೋಲ್‌, ಡೀಸೆಲ್‌ ದರ ಹೆಚ್ಚಿಸಲಾಗುತ್ತಿದೆ. ಐದು ದಿನಗಳಲ್ಲಿ ತೈಲ ದರ ಪ್ರತಿ ಲೀಟರ್‌ಗೆ ಒಟ್ಟು ₹ 3.20 ರಷ್ಟು ಹೆಚ್ಚಳ ಕಂಡಿದೆ.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು