ಬುಧವಾರ, ಮಾರ್ಚ್ 29, 2023
32 °C

ಪೆಟ್ರೊಲ್, ಡೀಸೆಲ್‌ ಮೇಲಿನ ವ್ಯಾಟ್ ಕಡಿತಕ್ಕೆ ಬಿಹಾರ ಸರ್ಕಾರ ನಿರ್ಧಾರ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಕೇಂದ್ರ ಸರ್ಕಾರ ತೈಲ ಬೆಲೆ ಮೇಲಿನ ಅಬಕಾರಿ ಸುಂಕವನ್ನು ಕಡಿತಗೊಳಿಸಿದ ನಂತರ ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಗುರುವಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್‌ ದರವನ್ನು ಪ್ರತಿ ಲೀಟರ್‌ಗೆ ₹3 ಕ್ಕಿಂತ ಹೆಚ್ಚಿನ ದರವನ್ನು ಕಡಿಮೆ ಮಾಡಿದೆ.

ಈ ಕುರಿತು ಟ್ವೀಟ್‌ ಮೂಲಕ ಘೋಷಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ‘ಕೇಂದ್ರ ಸರ್ಕಾರ ಪೆಟ್ರೊಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ನಮ್ಮ ರಾಜ್ಯ ಸರ್ಕಾರವೂ  ತೈಲ ಬೆಲೆ ಮೇಲಿನ ವ್ಯಾಟ್ ದರಗಳನ್ನು ಇಳಿಸುವ ಮೂಲಕ ಜನರ ಮೇಲಿನ ಹೊರೆ ಕಡಿಮೆ ಮಾಡುತ್ತಿದ್ದೇವೆ‘ ಎಂದು ಹೇಳಿದ್ದಾರೆ.

ಪ್ರತಿ ಲೀಟರ್‌ ಪೆಟ್ರೊಲ್‌ ಮತ್ತು ಡೀಸೆಲ್‌ ಬೆಲೆಯನ್ನು ಕ್ರಮವಾಗಿ ₹ 3.20 ಮತ್ತು ₹3.90ರಷ್ಟು ಕಡಿಮೆ ಮಾಡಿರುವುದಾಗಿ ನಿತೀಶ್ ಕುಮಾರ್ ಟ್ವೀಟ್‌ ಮಾಡಿದ್ದಾರೆ.

ಕೇಂದ್ರ ಸರ್ಕಾರ ಬುಧವಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸುಂಕವನ್ನು ಲೀಟರ್‌ಗೆ ಕ್ರಮವಾಗಿ ₹ 5 ಮತ್ತು ₹10 ರಷ್ಟು ಕಡಿಮೆ ಮಾಡಿದೆ. ಈ ಕ್ರಮವನ್ನು ಅನೇಕ ರಾಜ್ಯಗಳು ಅನುಸರಿಸುತ್ತಿವೆ. ಹೆಚ್ಚಾಗಿ  ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ ಆಡಳಿತವಿರುವ ರಾಜ್ಯಗಳಲ್ಲಿ ಈ ಕ್ರಮ ಚಾಲ್ತಿಯಲ್ಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು