ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನ್ಪುರ ಗಲಭೆ ಪ್ರಕರಣ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಾರ್ಯಕರ್ತರ ಬಂಧನ

ಸಿಎಎ ವಿರುದ್ಧ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಮತ್ತೆ ಬಿಡುಗಡೆಯಾಗಿದ್ದ ಆರೋಪಿ
Last Updated 9 ಜೂನ್ 2022, 4:15 IST
ಅಕ್ಷರ ಗಾತ್ರ

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸಂಘಟನೆಯ ಮೂವರು ಕಾರ್ಯಕರ್ತರನ್ನು ಬಂಧಿಸಿದ್ದಾರೆ.

ಇದರೊಂದಿಗೆ, ಕಾನ್ಪುರ ಗಲಭೆಯಲ್ಲಿ ಬಂಧನಕ್ಕೊಳಗಾದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿಎಫ್‌ಐ ಕಾರ್ಯಕರ್ತರು ಗಲಭೆಗೆ ಸಂಚು ರೂಪಿಸಿದ್ದು, ಜನರನ್ನು ಒಟ್ಟುಗೂಡಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತ ಪಿಎಫ್‌ಐ ಕಾರ್ಯಕರ್ತರು, ಗಲಭೆಯ ಪ್ರಮುಖ ಸಂಚುಕೋರ ಹಯಾತ್ ಝಾಫರ್ ಹಶ್ಮಿ ಜತೆ ಸಂಪರ್ಕ ಹೊಂದಿದ್ದಾರೆ.

ಬಂಧಿತ ಪಿಎಫ್‌ಐ ಕಾರ್ಯಕರ್ತರನ್ನು ಸೈಫುಲ್ಲಾ, ಮೊಹಮ್ಮದ್ ನಸೀಮ್ ಮತ್ತು ಮೊಹಮ್ಮದ್ ಉಮರ್ ಎಂದು ಗುರುತಿಸಲಾಗಿದೆ. ಈ ಮೂವರು 2019ರಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆಸಿ ಬಂಧನಕ್ಕೊಳಗಾಗಿ ಮತ್ತೆ ಬಿಡುಗಡೆಯಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಪ್ರವಾದಿ ಮಹಮ್ಮದ್ ವಿರುದ್ಧದ ಅವಹೇಳನಕಾರಿ ಹೇಳಿಕೆಯನ್ನು ಪ್ರತಿಭಟಿಸಿ ಕಾನ್ಪುರದಲ್ಲಿ ಗಲಭೆ ನಡೆಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT