ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಐ ಪ್ರಕರಣ: ಕೇರಳ, ಕರ್ನಾಟಕದ ಮೂರು ಕಡೆ ಎನ್‌ಐಎ ಶೋಧ

Last Updated 9 ಡಿಸೆಂಬರ್ 2022, 4:02 IST
ಅಕ್ಷರ ಗಾತ್ರ

ನವದೆಹಲಿ: ದೇಶದಲ್ಲಿ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಪಿಎಫ್‌ಐ ನಡೆಸಿದ ಪಿತೂರಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೇರಳ ಮತ್ತು ಕರ್ನಾಟಕದ ಮೂರು ಸ್ಥಳಗಳಲ್ಲಿ ಗುರುವಾರ ಶೋಧ ನಡೆಸಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕೇರಳದ ಕೊಯಿಕ್ಕೋಡ್ ಮತ್ತು ಕರ್ನಾಟಕದ ಕಲಬುರಗಿ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗಿದ್ದು, ಡಿಜಿಟಲ್‌ ಸಾಧನಗಳು ಹಾಗೂ ವಿವಿಧ ದಾಖಲೆಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

ನಿಷೇಧಿತ ಪಾಪ್ಯೂಲರ್‌ ಫ್ರಂಟ್‌ ಆಫ್‌ ಇಂಡಿಯಾ ವಿರುದ್ಧ ಎನ್‌ಐಎ ಏಪ್ರಿಲ್‌ 13ರಂದು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶೋಧ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.

ಕೇರಳ, ತಮಿಳುನಾಡು, ಕರ್ನಾಟಕ, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಭಯೋತ್ಪಾದಕ ಕೃತ್ಯಗಳನ್ನು ಎಸಗಲು ಹಾಗೂ ಭಾರತ ಮತ್ತು ವಿದೇಶಗಳಲ್ಲಿ ಹಣವನ್ನು ಸಂಗ್ರಹಿಸಲು ಪಿಎಫ್‌ಐನ ಪದಾಧಿಕಾರಿಗಳು, ಸದಸ್ಯರು ಮತ್ತು ಕಾರ್ಯಕರ್ತರು ಕ್ರಿಮಿನಲ್‌ ಸಂಚು ರೂಪಿಸಿದ್ದರು ಎಂದು ಅವರು ತಿಳಿಸಿದ್ದಾರೆ.

ದೇಶದ ವಿವಿಧೆಡೆ ಭಯೋತ್ಪಾದಕ ಕೃತ್ಯಗಳನ್ನು ನಡೆಸಲು ಆರೋಪಿಗಳು ತಮ್ಮ ಕಾರ್ಯಕರ್ತರಿಗೆ ತರಬೇತಿ ಶಿಬಿರಗಳನ್ನು ನಡೆಸುತ್ತಿದ್ದರು ಎಂದೂ ವಕ್ತಾರರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT