ನವದೆಹಲಿ: ಪಿಎಫ್‌ಐ ಸಂಘಟನೆಯ ಕೇರಳದ ವಿದ್ಯಾರ್ಥಿ ಘಟಕದ ಸದಸ್ಯ ರೌಫ್ ಶರೀಫ್ ಎಂಬುವವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ತಿರುವನಂತಪುರ ವಿಮಾನ ನಿಲ್ದಾಣದಲ್ಲಿ ಭಾನುವಾರ ಬಂಧಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಶರೀಫ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಅವರನ್ನು ಕೇರಳ ಹೈಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.

ಶರೀಫ್ ಅವರನ್ನು ಇ.ಡಿ ವಶಕ್ಕೆ ಒಪ್ಪಿಸುವಂತೆ ಕೋರಿ ಅಧಿಕಾರಿಗಳು ಹೈಕೋರ್ಟ್‌ಗೆ ಸೋಮವಾರ ಅರ್ಜಿ ಸಲ್ಲಿಸುವ ಸಾಧ್ಯತೆ ಎಂದು ಮೂಲಗಳು ಹೇಳಿವೆ.

ಸಂಘಟನೆಯ ವಿದ್ಯಾರ್ಥಿ ಘಟಕವಾದ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಕಾರ್ಯ ನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಪಿಎಫ್‌ಐ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣದ ತನಿಖೆ ನಡೆಸುತ್ತಿರುವ ಇ.ಡಿ ನೀಡಿದ್ದ ಸಮನ್ಸ್‌ಗಳನ್ನು ಪಡೆಯದೇ ಶರೀಫ್ ತಪ್ಪಿಸಿಕೊಳ್ಳುತ್ತಿದ್ದರು ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.