ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಹಿತಾಸಕ್ತಿಗಾಗಿ ಲಸಿಕೆ ಪ್ರಮಾಣಪತ್ರದಲ್ಲಿ ಮೋದಿ ಚಿತ್ರ: ಕೇಂದ್ರ

Last Updated 27 ಡಿಸೆಂಬರ್ 2021, 13:51 IST
ಅಕ್ಷರ ಗಾತ್ರ

ನವದೆಹಲಿ: ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕೋವಿಡ್ ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಚಿತ್ರವನ್ನು ಮುದ್ರಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ.

ಮುಂಬೈ ಮೂಲದ ಕಾರ್ಯಕರ್ತ ಅನಿಲ್ ಗಲ್‌ಗಲಿ ಮಾಹಿತಿ ಹಕ್ಕು ಕಾಯ್ದೆಯಡಿ (ಆರ್‌ಟಿಐ) ಸಲ್ಲಿಸಿದ ಅರ್ಜಿಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉತ್ತರಿಸಿದೆ.

ಇಂತಹ ಪ್ರಮುಖ ಸಂದೇಶಗಳನ್ನು ಸಾರ್ವಜನಿಕರಿಗೆ ತಲುಪಿಸಲು ಅತ್ಯಂತ ಪರಿಣಾಮಕಾರಿಯಾಗಿ ಪ್ರಕಟಿಸುವುದು ಸರ್ಕಾರದ ನೈತಿಕ ಜವಾಬ್ದಾರಿಯಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾನದಂಡಗಳ ಪ್ರಕಾರ ಕೋವಿಡ್ ಲಸಿಕೆ ಪ್ರಮಾಣಪತ್ರ ತಯಾರಿಸಲಾಗಿದ್ದು, ಕೋವಿಡ್ ನಡವಳಿಕೆಯ ಸಂದೇಶವನ್ನು ಸಾರುತ್ತಿದೆ. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುದ್ರಿಸಲಾಗಿದೆ ಎಂದು ತಿಳಿಸಿದೆ.

ಕೋವಿಡ್ ಪ್ರಮಾಣಪತ್ರದಲ್ಲಿ ಪ್ರಧಾನಿ ಮೋದಿ ಅವರ ಚಿತ್ರ ಇರಿಸಿರುವುದು ಈಗಾಗಲೇ ವಿವಾದಕ್ಕೀಡಾಗಿದೆ. ಈ ಕುರಿತು ಲಸಿಕೆ ಪ್ರಮಾಣಪತ್ರದಲ್ಲಿ ಪ್ರಧಾನಿ ಅವರ ಚಿತ್ರ ಪ್ರಕಟಿಸಲು ಸಚಿವ ಸಂಪುಟದಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆಯೇ ಅಥವಾ ಪ್ರಧಾನಮಂತ್ರಿ ಕಾರ್ಯಾಲಯದಿಂದ ನಿರ್ದೇಶನ ಬಂದಿದೆದೇ ಎಂಬುದನ್ನು ಆರ್‌ಟಿಐ ಅರ್ಜಿ ಮೂಲಕ ತಿಳಿಯಲು ಪ್ರಯತ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT