ಗುರುವಾರ , ಅಕ್ಟೋಬರ್ 6, 2022
26 °C

ಮಧ್ಯಪ್ರದೇಶದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿನಿಯರಿಂದ ಶೌಚಾಲಯ ಕ್ಲೀನಿಂಗ್

ಪಿಟಿಐ Updated:

ಅಕ್ಷರ ಗಾತ್ರ : | |

ಇಂದೋರ್: ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಕೈಯಿಂದ ಶೌಚಾಲಯ ಶುಚಿಗೊಳಿಸಿರುವ ಘಟನೆ ನಡೆದಿದೆ.

ಸ್ಥಳೀಯ ಮಾಧ್ಯಮಗಳಲ್ಲಿ ಈ ಕುರಿತು ವರದಿಯಾಗಿದ್ದು, ಮಧ್ಯಪ್ರದೇಶದ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ತನಿಖೆಗೆ ಆದೇಶಿಸಿದ್ದಾರೆ.

ಇದನ್ನೂ ಓದಿ: 

ಚಕ್‌ದೇವ್‌ಪುರ ಗ್ರಾಮದಲ್ಲಿರುವ ಪ್ರಾಥಮಿಕ, ಮಾಧ್ಯಮಿಕ ಶಾಲೆಯಲ್ಲಿ ಸಮವಸ್ತ್ರ ಧರಿಸಿರುವ ಬಾಲಕಿಯರ ಕೈಯಿಂದ ಶೌಚಾಲಯ ಶುಚಿಗೊಳಿಸಲಾಗಿದೆ.

ಐದನೇ ಹಾಗೂ 6ನೇ ತರಗತಿಯ ವಿದ್ಯಾರ್ಥಿನಿಯರಿಂದ ಶೌಚಾಲಯ ಶುಚಿಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತ್ತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು