ಸೋಮವಾರ, ಜೂನ್ 14, 2021
27 °C
2–18 ವಯೋಮಾನದವರ ಮೇಲೆ ಕೋವ್ಯಾಕ್ಸಿನ್‌ನ ಕ್ಲಿನಿಕಲ್‌ ಟ್ರಯಲ್‌ ಪ್ರಶ್ನಿಸಿ ಪಿಐಎಲ್‌

ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2 ರಿಂದ 18 ವರ್ಷ ವಯೋಮಾನದವರ ಮೇಲೆ ಕೋವ್ಯಾಕ್ಸಿನ್‌ ಲಸಿಕೆಯ  ಕ್ಲಿನಿಕಲ್‌ ಟ್ರಯಲ್‌ ನಡೆಸಲು ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿ ತನ್ನ ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಬುಧವಾರ ನೋಟಿಸ್‌ ನೀಡಿದೆ.

ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರಿರುವ ನ್ಯಾಯಪೀಠ, ಜುಲೈ 15ರ ಒಳಗಾಗಿ ತನ್ನ ನಿಲುವು ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ.

ಅಲ್ಲದೇ, ಕ್ಲಿನಿಕಲ್‌ ಟ್ರಯಲ್‌ ನಡೆಸದಂತೆ ಮಧ್ಯಂತರ ತಡೆ ನೀಡಲು ನ್ಯಾಯಪೀಠ ನಿರಾಕರಿಸಿತು.

2 ರಿಂದ 18 ವರ್ಷ ವಯೋಮಾನದವರ ಮೇಲೆ ಕೋವಿಡ್‌ ಲಸಿಕೆ ಕೋವ್ಯಾಕ್ಸಿನ್‌ನ 2 ಮತ್ತು 3ನೇ ಹಂತದ ಕ್ಲಿನಿಕಲ್‌ ಟ್ರಯಲ್‌ ನಡೆಸಲು, ಲಸಿಕೆ ಉತ್ಪಾದಿಸುವ ಕಂಪನಿ ಭಾರತ್‌ ಬಯೋಟೆಕ್‌ಗೆ ಭಾರತೀಯ ಪ್ರಧಾನ ಔಷಧ ನಿಯಂತ್ರಕರು (ಡಿಸಿಜಿಐ) ಮೇ 12ರಂದು ಅನುಮತಿ ನೀಡಿದ್ದಾರೆ.

ಕ್ಲಿನಿಕಲ್‌ ಟ್ರಯಲ್‌ಗೆ ನೀಡಿರುವ ಅನುಮತಿಯನ್ನು ರದ್ದುಪಡಿಸುವಂತೆ ಕೋರಿ ಸಂಜೀವ್‌ಕುಮಾರ್‌ ಎಂಬುವವರು ಪಿಐಎಲ್‌ ಸಲ್ಲಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು