ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟೂಲ್‌ಕಿಟ್‌ ಪ್ರಕರಣ: ತನಿಖೆಗೆ ಕೋರಿ ಪಿಐಎಲ್‌ ಸಲ್ಲಿಕೆ

Last Updated 19 ಮೇ 2021, 14:17 IST
ಅಕ್ಷರ ಗಾತ್ರ

ನವದೆಹಲಿ: ಟೂಲ್‌ಕಿಟ್‌ ಕುರಿತು ತನಿಖೆಗೆ ಆದೇಶಿಸಬೇಕು ಮತ್ತು ಕಾಂಗ್ರೆಸ್‌ ಪಕ್ಷದ ನೋಂದಣಿಯನ್ನು ಅಮಾನತಿನಲ್ಲಿರಿಸಬೇಕು ಎಂದು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ವಕೀಲರಾದ ಶಶಾಂಕ್‌ ಶೇಖರ್‌ ಝಾ ಈ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್‌, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವನ್ನು ಪ್ರತಿವಾದಿಗಳನ್ನಾಗಿ ಅರ್ಜಿಯಲ್ಲಿ ಹೆಸರಿಸಲಾಗಿದೆ.

ಕೋವಿಡ್‌–19 ಸಾಂಕ್ರಾಮಿಕ ಕಾಯಿಲೆ ನಿರ್ವಹಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರಲು ಕಾಂಗ್ರೆಸ್‌ ಈ ಟೂಲ್‌ಕಿಟ್‌ ತಯಾರಿಸಿದೆ ಎಂದು ಬಿಜೆಪಿ ಮಂಗಳವಾರ ಆರೋಪಿಸಿತ್ತು.

ಕೋವಿಡ್‌–19 ಸಂದರ್ಭದಲ್ಲಿ ಅಗತ್ಯ ವಸ್ತುಗಳ ಸಂಗ್ರಹಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನು ಸಿದ್ಧಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಝಾ ಅವರು ಅರ್ಜಿಯಲ್ಲಿ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT