ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಸಾರ್ವಜನಿಕ ಶೌಚಾಲಯ: ಪಿಐಎಲ್ ವಿಚಾರಣೆ

Last Updated 26 ಜುಲೈ 2021, 10:23 IST
ಅಕ್ಷರ ಗಾತ್ರ

ನವದೆಹಲಿ: ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಸಾರ್ವಜನಿಕ ಶೌಚಾಲಯಗಳನ್ನು ಒದಗಿಸಬೇಕು ಎಂಬ ಬೇಡಿಕೆ ಬಗ್ಗೆ ದೆಹಲಿ ಹೈಕೋರ್ಟ್ ಸಕ್ಷಮ ಪ್ರಾಧಿಕಾರಗಳ ಅಭಿಪ್ರಾಯ ಕೇಳಿದೆ.

ಕಾನೂನು ವಿದ್ಯಾರ್ಥಿನಿ ಜಾಸ್ಮಿನ್ ಕೌರ್ ಚಾಬ್ರಾ ಎನ್ನುವರು ದೆಹಲಿಯಲ್ಲಿ ತೃತೀಯ ಲಿಂಗಿಗಳಿಗೆ ಸಾರ್ವಜನಿಕ ಶೌಚಾಲಯಗಳನ್ನು ಅಥವಾ ಸಾರ್ವಜನಿಕ ಶೌಚಾಲಯಗಳಲ್ಲಿ ತೃತೀಯ ಲಿಂಗಿಗಳಿಗೆ ಪ್ರತ್ಯೇಕವಾಗಿ ಶೌಚಾಲಯಗಳನ್ನು ಒದಗಿಸಲು ಆದೇಶಿಸಬೇಕು ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಕೇಂದ್ರ ಸರ್ಕಾರ, ದೆಹಲಿ ಸರ್ಕಾರ, ನಗರಾಭಿವೃದ್ಧಿ ಇಲಾಖೆ ಹಾಗೂ ಅಲ್ಲಿನ ಮಹಾನಗರ ಪಾಲಿಕೆಗಳಿಗೆ ನೋಟಿಸ್ ನೀಡಿ ಈ ಬಗ್ಗೆ ಒಂದು ತಿಂಗಳಲ್ಲಿ ನಿಮ್ಮ ಅಭಿಪ್ರಾಯ ತಿಳಿಸಿ ಎಂದಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್ 13 ಕ್ಕೆ ಮೂಂದೂಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್ ಪಟೇಲ್ ಹಾಗೂ ನ್ಯಾ ಜ್ಯೋತಿ ಸಿಂಗ್ ಅವರನ್ನೊಳಗೊಂಡ ಪೀಠ ಈ ಅರ್ಜಿಯ ವಿಚಾರಣೆ ನಡೆಸಿತು.

‘ಈಗಾಗಲೇ ಮೈಸೂರು, ಲೂಧಿಯಾನಾ, ಭೂಪಾಲ್ ನಗರಗಳಲ್ಲಿ ತೃತೀಯ ಲಿಂಗಿಗಳಿಗೆ ಸಾರ್ವಜನಿಕ ಶೌಚಾಲಯದ ಸೌಲಭ್ಯ ಕಲ್ಪಿಸಲಾಗಿದೆ. ಆದರೆ, ದೆಹಲಿ ಮಹಾನಗರದಲ್ಲಿ ಈ ವ್ಯವಸ್ಥೆ ಇಲ್ಲದಿರುವುದು ಆಶ್ಚರ್ಯ ಮೂಡಿಸುತ್ತದೆ‘ ಎಂದು ಅರ್ಜಿದಾರರಾದ ಜಾಸ್ಮಿನ್ ಹೇಳಿದ್ದಾರೆ.

‘ಸಾರ್ವಜನಿಕ ಸ್ಥಳಗಳಲ್ಲಿ ತೃತೀಯ ಲಿಂಗಿಗಳಿಗೆ ಪ್ರತ್ಯೇಕ ಶೌಚಾಲಯ ಇಲ್ಲದಿರುವುದರಿಂದ ಅವರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಇದು ಸಂವಿಧಾನದ 14ನೇ ವಿಧಿಯ ಉಲ್ಲಂಘನೆ‘ ಎಂದು ಅವರು ಹೇಳಿದ್ದಾರೆ.

‘ಅಲ್ಲದೇ ಶೌಚಾಲಯಗಳ ಸೌಲಭ್ಯ ಒದಗಿಸಲು ಈಗಾಗಲೇ ಕೇಂದ್ರ ಸರ್ಕಾರ ಹಣಕಾಸಿನ ನೆರವು ನೀಡಿದ್ದರೂ ದೆಹಲಿ ಸರ್ಕಾರ ಅದನ್ನು ಬಳಸಿಲ್ಲ‘ ಎಂದು ಜಾಸ್ಮಿನ್ ಆರೋಪ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT