ಬುಧವಾರ, ಜೂನ್ 23, 2021
22 °C

ಕೋವಿಡ್‌ನಿಂದ ಮೃತಪಟ್ಟ ನ್ಯಾಯಾಂಗ ಸದಸ್ಯರ ಕುಟುಂಬಕ್ಕೆ ಪರಿಹಾರ ಕೋರಿ ಪಿಐಎಲ್‌

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19ನಿಂದ ಸಾವಿಗೀಡಾದ ನ್ಯಾಯಾಂಗ ಸದಸ್ಯರ ಕುಟುಂಬಕ್ಕೆ ₹1 ಕೋಟಿ ಪರಿಹಾರವನ್ನು ನೀಡುಬೇಕು. ಜತೆಗೆ ಅವರನ್ನು ಮುಂಚೂಣಿ ಕಾರ್ಯಕರ್ತರು ಎಂದು ಘೋಷಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡಿದ್ದು, ಪ್ರತಿಕ್ರಿಯಿಸುವಂತೆ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್‌ ಪಟೇಲ್‌ ಮತ್ತು ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರ ಪೀಠವು ಈ ಸಂಬಂಧ ದೆಹಲಿ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಕರ್ತವ್ಯದಲ್ಲಿ ನಿರತರಾಗಿದ್ದ ವೇಳೆ ಕೋವಿಡ್‌ನಿಂದ ಮೃತಪಟ್ಟ ಹೈಕೋರ್ಟ್‌ ಸೇರಿದಂತೆ ಇತರೆ ನ್ಯಾಯಾಲಯಗಳ ಸಿಬ್ಬಂದಿಯ ಕುಟುಂಬದವರಿಗೂ ₹50 ಲಕ್ಷ ಪರಿಹಾರ ಧನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಈ ಸಂಬಂಧ ವಕೀಲ ತನ್ವೀರ್‌ ಅಹಮದ್‌ ಮಿರ್‌ ಅವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

‘ಕೋವಿಡ್‌–19ನಿಂದ ಮೃತಪಟ್ಟ ಸರ್ಕಾರಿ ಅಧಿಕಾರಿಗಳ ಕುಟುಂಬದವರಿಗೆ ದೆಹಲಿ ಸರ್ಕಾರವು ಪರಿಹಾರವನ್ನು ನೀಡುತ್ತದೆ. ಆದರೆ ಈ ರೀತಿಯ ಕ್ರಮಗಳನ್ನು ನ್ಯಾಯಾಂಗ ಕ್ಷೇತ್ರದಲ್ಲಿರುವ ಅಧಿಕಾರಿಗಳು, ಸಿಬ್ಬಂದಿಗೆ ವಿಸ್ತರಿಸಿಲ್ಲ. ಇವರು ಜನರಿಗೆ ನ್ಯಾಯ ಒದಗಿಸಲು ಈ ಕಠಿಣ ಸಮಯದಲ್ಲೂ ಕೆಲಸ ಮಾಡುತ್ತಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು