ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ವಂದೇ ಮಾತರಂ’ಗೂ ರಾಷ್ಟ್ರಗೀತೆ ಮಾನ್ಯತೆ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

Last Updated 25 ಮೇ 2022, 11:37 IST
ಅಕ್ಷರ ಗಾತ್ರ

ನವದೆಹಲಿ: ‘ಜನ ಗಣಮನ’ ಹಾಗೂ ‘ವಂದೇ ಮಾತರಂ’ ಗೀತೆಗಳನ್ನು ಸಮಾನವಾಗಿ ಪ್ರಚಾರ ಮಾಡಲು ನೀತಿ ರೂಪಿಸಬೇಕು ಎಂದು ಕೋರಿದ ಅರ್ಜಿಯ ಕುರಿತ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ದೆಹಲಿ ಮತ್ತು ಕೇಂದ್ರ ಸರ್ಕಾರಕ್ಕೆ ದೆಹಲಿ ಹೈಕೋರ್ಟ್ ಸೂಚನೆ ನೀಡಿದೆ.

ಈ ಸಂಬಂಧ ಬಿಜೆಪಿ ನಾಯಕ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಬುಧವಾರ ವಿಚಾರಣೆ ನಡೆಸಿದನ್ಯಾಯಮೂರ್ತಿಗಳಾದ ವಿಪಿನ್ ಸಂಘಿ ಮತ್ತು ಸಚಿನ್ ದತ್ತಾ ಅವರು, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದರು. ಅಲ್ಲದೆ, ಈ ಬಗ್ಗೆ ಉತ್ತರಿಸಲು ಸಮಯಾವಕಾಶ ನೀಡಿದರು.

ಅಲ್ಲದೆ, ಈ ಬಗ್ಗೆ ಶಿಕ್ಷಣ ಸಂಶೋಧನೆ ಮತ್ತು ತರಬೇತಿಗಾಗಿನ ರಾಷ್ಟ್ರೀಯ ಮಂಡಳಿ(ಎನ್‌ಸಿಆರ್‌ಟಿ) ಸಹ ಅಭಿಪ್ರಾಯ ತಿಳಿಸಬೇಕು ಎಂದು ಸೂಚಿಸಲಾಗಿದೆ.

ಏತನ್ಮಧ್ಯೆ, ಈ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವ ಮುನ್ನವೇ ಅರ್ಜಿದಾರ ಈ ಅರ್ಜಿ ಸಲ್ಲಿಸಿದ್ದಾಗಿ ಪ್ರಚಾರ ಮಾಡಿರುವುದಕ್ಕೆ ನ್ಯಾಯಾಲಯ ಬೇಸರ ವ್ಯಕ್ತಪಡಿಸಿತು. ಈ ರೀತಿ ಮಾಡಿದರೆ, ಜನಪ್ರಿಯತೆಗಾಗಿ ಈ ಅರ್ಜಿ ಸಲ್ಲಿಸಲಾಗಿದೆ ಎಂಬಂತೆ ಭಾವಿಸಲಾಗುತ್ತದೆ ಎಂದು ಹೇಳಿತು.

ಈ ವೇಳೆ ‘ವಂದೇ ಮಾತರಂ’ಗೆ ಗೌರವ ಸಲ್ಲಿಸಬೇಕು ಎಂಬ ನಿಯಮ ಅಥವಾ ಮಾರ್ಗಸೂಚಿಗಳು ಇಲ್ಲದ ಕಾರಣ, ಈ ಗೀತೆಯನ್ನು ಬೇಕಾಬಿಟ್ಟಿ ಹಾಡಲಾಗುತ್ತಿದೆ. ಜೊತೆಗೆ ಪಕ್ಷಗಳು ಮತ್ತು ಸಿನಿಮಾಗಳಲ್ಲಿ ಇದನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ‘ಜನ ಗಣ ಮನ’ ಮತ್ತು ‘ವಂದೇ ಮಾತರಂ’ ಗೀತೆಯನ್ನು ಪ್ರಚಾರ ಮಾಡಲು ಸರ್ಕಾರ ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಭಾರತದ ಸ್ವಾತಂತ್ರ್ಯ ಹೋರಾಟದ ಭಾಗವಾಗಿ ಹಾಡಲಾದ ‘ವಂದೇ ಮಾತರಂ’ ಗೀತೆಗೆ ‘ಜನ ಗಣ ಮನ’ ಗೀತೆಗೆ ನೀಡಿದಷ್ಟು ಗೌರವ ನೀಡಬೇಕು ಎಂದು ಅರ್ಜಿದಾರ ಅಶ್ವಿನಿ ಕುಮಾರ್ ಉಪಾಧ್ಯಾಯ್ ಕೋರಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT