ಸೋಮವಾರ, ಜೂನ್ 21, 2021
29 °C
ಕೇಂದ್ರಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌

ಜಿಎನ್‌ಸಿಟಿಡಿ ತಿದ್ದುಪಡಿ ಕಾಯ್ದೆ ರದ್ದು ಕೋರಿ ಪಿಐಎಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿ ರಾಷ್ಟ್ರೀಯ ರಾಜಧಾನಿ ಸರ್ಕಾರ ತಿದ್ದುಪಡಿ ಕಾಯ್ದೆಯನ್ನು  (ಜಿಎನ್‌ಸಿಟಿಡಿ) ರದ್ದುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತಂತೆ ತನ್ನ ನಿಲುವು ತಿಳಿಸುವಂತೆ ದೆಹಲಿ ಹೈಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಮಂಗಳವಾರ ನೋಟಿಸ್‌ ನೀಡಿದೆ.

ಮುಖ್ಯನ್ಯಾಯಮೂರ್ತಿ ಡಿ.ಎನ್‌.ಪಟೇಲ್‌ ಹಾಗೂ ನ್ಯಾಯಮೂರ್ತಿ ಜ್ಯೋತಿ ಸಿಂಗ್‌ ಅವರಿರುವ ಪೀಠವು ಗೃಹ ಸಚಿವಾಲಯ ಹಾಗೂ ಲೆಫ್ಟಿನೆಂಟ್‌ ಗವರ್ನರ್ ಕಚೇರಿಗೆ ನೋಟಿಸ್‌ ಜಾರಿ ಮಾಡಿದೆ.

ಈ ತಿದ್ದುಪಡಿ ಕಾಯ್ದೆಯು ಲೆಫ್ಟಿನೆಂಟ್‌ ಗವರ್ನರ್‌ ಅವರಿಗೆ ಹೆಚ್ಚು ಅಧಿಕಾರ ನೀಡುತ್ತದೆ.

‘ಈ ಅರ್ಜಿಯಲ್ಲಿ ಚುನಾಯಿತ ಸರ್ಕಾರವನ್ನು ಪ್ರತಿವಾದಿಯನ್ನಾಗಿ ಮಾಡಿಲ್ಲ. ಹೀಗಾಗಿ ಈ ಪಿಐಎಲ್‌ ಸಮರ್ಥನೀಯವಲ್ಲ’ ಎಂದು ದೆಹಲಿ ಸರ್ಕಾರದ ಪರ ವಕೀಲ ಸಂತೋಷ್‌ ಕೆ.ತ್ರಿಪಾಠಿ ಹೇಳಿದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು