ಸೋಮವಾರ, ಜೂನ್ 14, 2021
26 °C

10,12ನೇ ತರಗತಿ ವಿದ್ಯಾರ್ಥಿಗಳಿಗೆ ಲಸಿಕೆ: ಪಿಐಎಲ್‌ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪರೀಕ್ಷೆಗೆ ಹಾಜರಾಗಲಿರುವ 10 ಮತ್ತು 12ನೇ ತರಗತಿಯ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ದೆಹಲಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ಸಲ್ಲಿಸಲಾಗಿದೆ.

ಈ ಬಗ್ಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಅರೋಗ್ಯ ಮತ್ತು ಶಿಕ್ಷಣ ಸಚಿವಾಲಯ ಹಾಗೂ ದೆಹಲಿ ಸರ್ಕಾರಕ್ಕೆ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಜಸ್ಮೀತ್‌ ಸಿಂಗ್‌ ಅವರನ್ನೊಳಗೊಂಡ ಪೀಠವು ಈ ನೋಟಿಸ್‌ ಜಾರಿಗೊಳಿಸಿದೆ.

ಕೋವಿಡ್‌–19 ಲಸಿಕೆಯನ್ನು 18 ವರ್ಷದ ಕೆಳಗಿನವರಿಗೂ ನೀಡಬಹುದೇ ಎಂದು ಪೀಠವು ಪ್ರಶ್ನಿಸಿದೆ.

ವಕೀಲರಾದ ಜ್ಯೋತಿ ಅಗರವಾಲ್‌, ಸಂಜೀವಾಣಿ ಅಗರವಾಲ್‌ ಮತ್ತು ಪ್ರದೀಪ್‌ ಶೇಖಾವತ್‌ ಅವರು ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

‘10ನೇ ತರಗತಿಯ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿದೆ’ ಎಂದು ದೆಹಲಿ ಸರ್ಕಾರದ ಪರ ವಕೀಲ ಸಂತೋಷ್‌ ಕೆ. ತ್ರಿಪಾಠಿ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿದರು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು