ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇರಳ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ ಪಿಣರಾಯಿ ವಿಜಯನ್

Last Updated 20 ಮೇ 2021, 11:24 IST
ಅಕ್ಷರ ಗಾತ್ರ

ತಿರುವನಂತಪುರಂ: ಪಿಣರಾಯಿ ವಿಜಯನ್‌ ಅವರು ಕೇರಳದ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಇಂದು ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣವಚನ ಸಮಾರಂಭವುನಗರದ ಸೆಂಟ್ರಲ್‌ ಸ್ಟೇಡಿಯಂನಲ್ಲಿ ಕೋವಿಡ್‌ ಮಾರ್ಗಸೂಚಿಗೆ ಅನುಗುಣವಾಗಿ ನಡೆಯಿತು.76 ವರ್ಷದ ವಿಜಯನ್‌ ಅವರಿಗೆ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಪ್ರಮಾಣ ಬೋಧಿಸಿದರು.

140 ಸದಸ್ಯ ಬಲದಕೇರಳ ವಿಧಾನಸಭೆಗೆ ಏಪ್ರಿಲ್‌6 ರಂದು ಚುನಾವಣೆ ನಡೆದಿತ್ತು. ಸಿಪಿಎಂನೇತೃತ್ವದ ಆಡಳಿತಾರೂಢ ಎಲ್‌ಡಿಎಫ್‌ ಪಕ್ಷವು 99 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ಪಡಿಗಣಿಸಿಕಾಂಗ್ರೆಸ್‌ ಮತ್ತು ಯುಡಿಎಫ್‌ ಮೈತ್ರಿಕೂಟದ ನಾಯಕರು ಪ್ರಮಾಣವಚನ ಸಮಾರಂಭದಿಂದ ದೂರ ಉಳಿದರು.

ಕೋವಿಡ್ ಸಾಂಕ್ರಾಮಿಕ ರೋಗವನ್ನು ಗಮನದಲ್ಲಿಟ್ಟುಕೊಂಡು ಸಮಾರಂಭದಲ್ಲಿ ಭಾಗವಹಿಸುವವರ ಸಂಖ್ಯೆಯನ್ನುಮಿತಿಗೊಳಿಸಬೇಕು ಎಂದು ಕೇರಳ ಹೈಕೋರ್ಟ್‌ ಬುಧವಾರರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT