ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂಂಚ್‌: ಉಗ್ರರ ಅಡಗು ತಾಣದಿಂದ ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ

Last Updated 30 ಡಿಸೆಂಬರ್ 2020, 6:43 IST
ಅಕ್ಷರ ಗಾತ್ರ

ಜಮ್ಮು: ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಯ ದಬ್ಬಿ ಗ್ರಾಮದಲ್ಲಿದ್ದ ಉಗ್ರರ ಅಡಗು ತಾಣದಿಂದ ಶಸ್ತ್ರಾಸ್ತ್ರ, ಮದ್ದುಗುಂಡು ಮತ್ತು ಸ್ಫೋಟಕ ವಸ್ತುಗಳನ್ನು ಭದ್ರತಾ ಪಡೆಯು ಬುಧವಾರ ವಶಕ್ಕೆ ಪಡೆದಿದೆ ಎಂದು ಅಧಿಕಾರಿಗಳು ತಿಳಿಸಿದರು.

ಭಾನುವಾರ ಪಾಕಿಸ್ತಾನದ ಉಗ್ರರ ಸಹಚರನೊಬ್ಬನನ್ನು ಬಂಧಿಸಲಾಗಿತ್ತು. ಈತನನ್ನು ಯಾಸೀನ್‌ ಖಾನ್‌ ಎಂದು ಗುರುತಿಸಲಾಗಿದೆ. ಆತ ನೀಡಿದ ಮಾಹಿತಿ ಮೇರೆಗೆ ಉಗ್ರರ ಅಡಗು ತಾಣದ ಮೇಲೆ ದಾಳಿ ನಡೆಸಿ, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಸೇನೆಯು ಜಂಟಿಯಾಗಿ ಈ ಕಾರ್ಯಾಚರಣೆ ನಡೆಸಿತು. ಈ ವೇಳೆ ಎರಡು ಪಿಸ್ತೂಲ್‌, ಎರಡು ಗ್ರೇನೇಡ್‌ ಅನ್ನು ವಶಕ್ಕೆ ಪಡೆಯಲಾಗಿದೆ. ಇವುಗಳನ್ನು ಪೊದೆಯೊಂದರ ಒಳಗೆ ಪಾಲಿಥಿನ್‌ ಚೀಲಗಳಲ್ಲಿ ಅಡಗಿಸಿ ಇಡಲಾಗಿತ್ತು ಎಂದು ಪೂಂಚ್‌ನ ಪೊಲೀಸ್‌ ವರಿಷ್ಠಾಧಿಕಾರಿ ರಮೇಶ್‌ ಕುಮಾರ್‌ ಅಗರವಾಲ್‌ ಮಾಹಿತಿ ನೀಡಿದರು.

ಪೂಂಚ್‌ನಲ್ಲಿರುವ ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆಸಲು ಉಗ್ರ ಸಂಘಟನೆಗಳು ಸಂಚು ಹೂಡಿದ್ದವು. ಆದರೆ ಭದ್ರತಾ ಪಡೆಯು ಇದನ್ನು ವಿಫಲಗೊಳಿಸಿದೆ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT