ಶುಕ್ರವಾರ, ಜನವರಿ 21, 2022
30 °C

ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ: ಮೆಹಬೂಬಾ ಮುಫ್ತಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ತನ್ನನ್ನು ಮತ್ತೆ ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಅಧ್ಯಕ್ಷೆ ಮೆಹಬೂಬಾ ಮುಫ್ತಿ ಗುರುವಾರ ಆರೋಪಿಸಿದ್ದಾರೆ.

ಈ ಮಧ್ಯೆ ಪಕ್ಷದ ಇಬ್ಬರು ಸಹೋದ್ಯೋಗಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮೆಹಬೂಬಾ, 'ಮತ್ತೆ ನನ್ನನ್ನು ಗೃಹಬಂಧನದಲ್ಲಿ ಇರಿಸಲಾಗಿದ್ದು, ಪಕ್ಷದ ಮುಖ್ಯ ವಕ್ತಾರ ಸುಹೈಲ್ ಬುಖಾರಿ ಹಾಗೂ ವಕ್ತಾರ ನಜ್ಮು ಸಾಕೀಬ್‌ರನ್ನು ಪೊಲೀಸರು ಬಂಧಿಸಿದ್ದಾರೆ' ಎಂದು ಹೇಳಿದ್ದಾರೆ.

 

 

 

ಕೇಂದ್ರ ಸರ್ಕಾರವು ಉಗ್ರರ ಹೆಸರಿನಲ್ಲಿ ಅಮಾಯಕ ನಾಗರಿಕರನ್ನು ಕೊಲ್ಲುತ್ತಿದೆ ಎಂದು ಮೆಹಬೂಬಾ ಮುಫ್ತಿ ಆರೋಪ ಮಾಡಿದ್ದಾರೆ. ಹೈದರ್‌ಪೋರಾ ಎನ್‌ಕೌಂಟರ್ ವಿರುದ್ಧ ಪ್ರತಿಭಟನೆಯನ್ನು ನಡೆಸಿದ್ದರಲ್ಲದೆ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದರು.

ಇದನ್ನೂ ಓದಿ: 

 

ನಾಗರಿಕರ ಮೃತದೇಹಗಳನ್ನು ಅಂತ್ಯಕ್ರಿಯೆ ನಡೆಸಲು ಕುಟುಂಬಗಳಿಗೆ ಹಸ್ತಾಂತರಿಸದಿರುವುದು ಅಮಾನವೀಯ ಕೃತ್ಯವಾಗಿದೆ ಎಂದು ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

ಏತನ್ಮಧ್ಯೆ ಹೈದರ್‌ಪೋರಾ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ. ಸೋಮವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮೃತಪಟ್ಟಿದ್ದರು. ಅವರು ಭಯೋತ್ಪಾದಕರ ಸಂಪರ್ಕ ಹೊಂದಿದ್ದರು ಎಂದು ಭದ್ರತಾ ಪಡೆ ವಾದಿಸಿದರೆ, ಅಮಾಯಕ ನಾಗರಿಕರು ಎಂದು ಕುಟುಂಬ ಸದಸ್ಯರು ಹೇಳುತ್ತಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು