ಶನಿವಾರ, ನವೆಂಬರ್ 28, 2020
18 °C

ಪ್ಲಾಸ್ಮಾ ಚಿಕಿತ್ಸೆ ನಿಷ್ಪ್ರಯೋಜಕ: ಕೋವಿಡ್‌ ಮಾರ್ಗಸೂಚಿಯಿಂದ ಕೈಬಿಡಲು ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ರೂಪಿಸಲಾಗಿದ್ದ ‘ರಾಷ್ಟ್ರೀಯ ಕೋವಿಡ್‌-19 ಮಾನದಂಡ’ದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಡಲು ಭಾರತೀಯ ವೈದ್ಯಕೀಯ ಸಂಶೋಧನಾ ಪರಿಷತ್ತು (ಐಸಿಎಂಆರ್‌) ನಿರ್ಧರಿಸಿದೆ. ಪ್ಲಾಸ್ಮಾ ಥೆರಪಿಯಿಂದ ಕೋವಿಡ್‌ ರೋಗಿಗಳು ಗುಣಮುಖರಾಗುತ್ತಿಲ್ಲ ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಇದನ್ನು ಕೈಬಿಡಲು ನಿರ್ಧರಿಸಿದ್ದೇವೆ ಎಂದು ಐಸಿಎಂಆರ್‌ ಹೇಳಿದೆ.

ಐಸಿಎಂಆರ್‌ನ ಮೇಲುಸ್ತುವಾರಿಯಲ್ಲಿ ದೇಶದ 29 ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಥೆರಪಿಯ ಮೇಲೆ ಅಧ್ಯಯನ ನಡೆಸಲಾಗಿತ್ತು. ಈ ಅಧ್ಯಯನದಲ್ಲಿ 350 ಸಂಶೋಧಕರು ಭಾಗಿಯಾಗಿದ್ದರು. 464 ರೋಗಿಗಳ ಮೇಲೆ ಪ್ರಯೋಗ ನಡೆಸಲಾಗಿತ್ತು. ಅಧ್ಯಯನ ವರದಿಯು ‘ಬ್ರಿಟಿಷ್ ಮೆಡಿಕಲ್ ಜರ್ನಲ್‌’ನಲ್ಲಿ ಶೀಘ್ರವೇ ಪ್ರಕಟವಾಗಲಿದೆ ಎಂದು ಐಸಿಎಂಆರ್‌ ತಿಳಿಸಿದೆ.

‘ಕೋವಿಡ್‌ನಿಂದ ಗುಣಮುಖರಾದವರಿಂದ ಸಂಗ್ರಹಿಸಿದ ಪ್ಲಾಸ್ಮಾವನ್ನು ಕೋವಿಡ್‌ ರೋಗಿಗಳಿಗೆ ನೀಡಿ ಪರೀಕ್ಷೆ ನಡೆಸಲಾಗಿದೆ. ಇದರಿಂದ ಕೋವಿಡ್‌ ರೋಗಿಗಳಲ್ಲಿ ಮರಣ ಪ್ರಮಾಣವು ಕಡಿಮೆಯಾಗಿಲ್ಲ. ರೋಗಿಯ ದೇಹದಲ್ಲಿ ರೋಗ ಉಲ್ಭಣವಾಗುವುದನ್ನು ಪ್ಲಾಸ್ಮಾ ಥೆರಫಿ ತಡೆಯಲಿಲ್ಲ. ಹೀಗಾಗಿ ರಾಷ್ಟ್ರೀಯ ಕೋವಿಡ್‌-19 ಚಿಕಿತ್ಸಾ ಮಾನದಂಡದಿಂದ ಪ್ಲಾಸ್ಮಾ ಥೆರಪಿಯನ್ನು ಕೈಬಿಡುವ ಸಂಬಂಧ ಚರ್ಚೆ ನಡೆಯುತ್ತಿದೆ. ಶೀಘ್ರವೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ’ ಎಂದು ಐಸಿಎಂಆರ್ ಪ್ರಧಾನ ನಿರ್ದೇಶಕ ಬಲರಾಂ ಭಾರ್ಗವ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು