ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ರಾಜ್ಯಗಳಲ್ಲಿ ಶೇ 25ಕ್ಕಿಂತ ಅಧಿಕ ಕೋವಿಡ್‌ ಪ್ರಕರಣ

Last Updated 13 ಮೇ 2021, 12:19 IST
ಅಕ್ಷರ ಗಾತ್ರ

ನವದೆಹಲಿ: ದೇಶದ ಹತ್ತು ರಾಜ್ಯಗಳಲ್ಲಿ ಕೊರೊನಾ ಸೋಂಕು ದೃಢಪಡುವ ಪ್ರಮಾಣ ಶೇ 25ರಷ್ಟು ಇಲ್ಲವೇ ಅದಕ್ಕಿಂತಲೂ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಗುರುವಾರ ಹೇಳಿದೆ.

ಕಳೆದ ಮೂರು ದಿನಗಳಿಂದ ಈ ಸಂಬಂಧ ಅಂಕಿ–ಅಂಶಗಳನ್ನು ಸಂಗ್ರಹಿಸಲಾಗಿದ್ದು, ದಿನದಲ್ಲಿ ಪತ್ತೆಯಾಗುವ ಹೊಸ ಪ್ರಕರಣಗಳಲ್ಲಿಯೂ ಹೆಚ್ಚಳ ಕಂಡುಬಂದಿದೆ ಎಂದು ಅಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

12 ರಾಜ್ಯಗಳಲ್ಲಿ ಲಕ್ಷಕ್ಕೂ ಅಧಿಕ ಸಕ್ರಿಯ ಕೋವಿಡ್‌–19 ಪ್ರಕರಣಗಳಿವೆ. 24 ರಾಜ್ಯಗಳಲ್ಲಿ ಸೋಂಕು ದೃಢಪಡುವ ಪ್ರಮಾಣ ಶೇ 15ಕ್ಕಿಂತ ಹೆಚ್ಚಿದೆ ಎಂದು ತಿಳಿಸಿದರು.

ದೇಶದಲ್ಲಿ ಗುರುವಾರ ಹೊಸದಾಗಿ 3,62,727 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 2,37,03,665ಕ್ಕೇರಿದಂತಾಗಿದೆ. ಬೆಳಿಗ್ಗೆ 8ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ 4,120 ಜನರು ಮೃತಪಟ್ಟಿದ್ದು, ಸಾವನ್ನಪ್ಪಿದವರ ಒಟ್ಟು ಸಂಖ್ಯೆ 2,58,317ಕ್ಕೇರಿದಂತಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT