ಶುಕ್ರವಾರ, ಮೇ 20, 2022
19 °C

ವಿಮಾನಗಳಲ್ಲಿ, ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತ ಬಿತ್ತರಿಸಲು ಕೇಂದ್ರ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶಿಯ ವಿಮಾನಗಳಲ್ಲಿ ಹಾಗೂ ವಿಮಾನ ನಿಲ್ದಾಣಗಳಲ್ಲಿ ಭಾರತೀಯ ಸಂಗೀತವನ್ನು ಬಿತ್ತರಿಸುವಂತೆ ನಾಗರಿಕ ವಿಮಾನಯಾನ ಸಚಿವಾಲಯವು ವಿಮಾನಯಾನ ಸಂಸ್ಥೆಗಳಿಗೆ ಮಂಗಳವಾರ ಸೂಚಿಸಿದೆ. 

ದೇಶಿಯ ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಭಾರತೀಯ ಸಂಗೀತವನ್ನು ಪ್ರಚಾರ ಮಾಡಬೇಕು ಎಂದು ಡಿಸೆಂಬರ್‌ 23 ರಂದು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಅವರಿಗೆ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಮಂಡಳಿಯು (ಐಸಿಸಿಆರ್‌)  ಮನವಿ ಮಾಡಿತ್ತು. 

ಈ ಸಂಬಂಧ ವಿಮಾನಯಾನ ಸಂಸ್ಥೆಗಳು ಹಾಗೂ ವಿಮಾನ ನಿಲ್ದಾಣಗಳಿಗೆ ಪತ್ರ ಬರೆದಿರುವ  ಸಚಿವಾಲಯವು,‘ ಜಗತಿನಾದ್ಯಂತ ವಿವಿಧ ವಿಮಾನಯಾನ ಸಂಸ್ಥೆಗಳು ತಮ್ಮ ದೇಶಕ್ಕೆ ಸೇರಿದ ಸಂಗೀತವನ್ನು ತಮ್ಮ ವಿಮಾನಗಳಲ್ಲಿ ಬಿತ್ತರಿಸುತ್ತದೆ. ಉದಾಹರಣೆಗೆ ಅಮೆರಿಕದ ವಿಮಾನಯಾನ ಸಂಸ್ಥೆಗಳು ತಮ್ಮ ವಿಮಾನಗಳಲ್ಲಿ ಜ್ಯಾಸ್‌ ಸಂಗೀತವನ್ನು ಪ್ರಸಾರ ಮಾಡಿದರೆ, ಮಧ್ಯ ಪೂರ್ವ ದೇಶಗಳ ವಿಮಾನಯಾನ ಸಂಸ್ಥೆಗಳು ಅರಬ್‌ ಸಂಗೀತವನ್ನು ಬಿತ್ತರಿಸುತ್ತದೆ’ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು