ಭಾನುವಾರ, ಸೆಪ್ಟೆಂಬರ್ 19, 2021
28 °C

‘ಮಾದರಿ ಪೊಲೀಸ್‌ ಮಸೂದೆ’ ರೂಪಿಸುವಂತೆ ಕೋರಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಮಾದರಿ ಪೊಲೀಸ್‌ ಮಸೂದೆ’ ರೂಪಿಸಲು ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ಜನಸ್ನೇಹಿ, ಪಾರದರ್ಶಕ, ಸ್ವತಂತ್ರ ಮತ್ತು ಉತ್ತರದಾಯಿತ್ವ ಹೊಂದಿರುವ ಪೊಲೀಸ್‌ ವ್ಯವಸ್ಥೆ ರೂಪಿಸುವ ಮಸೂದೆ ರಚಿಸುವ ಅಗತ್ಯವಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ವಕೀಲ ಮತ್ತು ದೆಹಲಿಯ ಬಿಜೆಪಿ ಘಟಕದ ಮಾಜಿ ವಕ್ತಾರರಾದ ಅಶ್ವಿನಿ ಉಪಾಧ್ಯಾಯ ಅವರು ಈ ಅರ್ಜಿ ಸಲ್ಲಿಸಿದ್ದಾರೆ. ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಪೊಲೀಸ್‌ ಕಾಯ್ದೆಗಳನ್ನು ಅಧ್ಯಯನ ನಡೆಸಿ ‘ಮಾದರಿ ಪೊಲೀಸ್‌ ಮಸೂದೆ’ ರೂಪಿಸಲು ನ್ಯಾಯಾಂಗ ಆಯೋಗ ಅಥವಾ ತಜ್ಞರ ಸಮಿತಿ ರಚಿಸವಂತೆ ಅವರು ಕೋರಿದ್ದಾರೆ.

ವಿಶೇಷವಾಗಿ ಅಮೆರಿಕ, ಫ್ರಾನ್ಸ್‌, ಸಿಂಗಪುರದಂತಹ ರಾಷ್ಟ್ರಗಳಲ್ಲಿನ ಪೊಲೀಸ್‌ ಕಾಯ್ದೆಗಳನ್ನು ಸಮಗ್ರವಾಗಿ ಅಧ್ಯಯನ ಮಾಡುವುದು ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು