ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ಪ್ರಚಾರದ ವೇಳೆ ಮಾಸ್ಕ್‌ ಧಾರಣೆ ಕಡ್ಡಾಯಗೊಳಿಸಲು ಕೋರಿ ಅರ್ಜಿ

ಕೇಂದ್ರ, ಚುನಾವಣಾ ಆಯೋಗಕ್ಕೆ ದೆಹಲಿ ಹೈಕೋರ್ಟ್‌ ನೋಟಿಸ್‌
Last Updated 8 ಏಪ್ರಿಲ್ 2021, 7:56 IST
ಅಕ್ಷರ ಗಾತ್ರ

ನವದೆಹಲಿ: ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಚುನಾವಣಾ ಪ್ರಚಾರದ ವೇಳೆ ಭಾಗವಹಿಸುವ ಎಲ್ಲರೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸುವ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗಕ್ಕೆದೆಹಲಿ ಹೈಕೋರ್ಟ್‌ ಗುರುವಾರ ನೋಟಿಸ್‌ ನೀಡಿದೆ.

ಈ ಕುರಿತು ಉತ್ತರ ಪ್ರದೇಶದ ಮಾಜಿ ಡಿಜಿಪಿ ಮತ್ತು ಸೆಂಟರ್‌ ಫಾರ್ ಅಕೌಂಟೆಬಿಲಿಟಿ ಮತ್ತು ಸಿಸ್ಟಮಿಕ್ ಚೇಂಜ್ ಸಂಸ್ಥೆ ಅಧ್ಯಕ್ಷರಾಗಿರುವ ವಿಕ್ರಮ್ ಸಿಂಗ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜಸ್ಮೀತ್ ಸಿಂಗ್ ಅವರನ್ನೊಳಗೊಂಡ ಪೀಠ ನಡೆಸಿತು.

ಚುನಾವಣಾ ಪ್ರಚಾರದಲ್ಲಿ ತೊಡಗಿರುವವರು ಹಾಗೂ ಅಭ್ಯರ್ಥಿಗಳು, ಕೋವಿಡ್‌– 19 ಪ್ರಸರಣ ನಿಯಂತ್ರಿಸುವ ಸಂಬಂಧ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ನು ಪದೇಪದೇ ಉಲ್ಲಂಘಿಸುತ್ತಿದ್ದಾರೆ ಎಂದು ಅರ್ಜಿದಾರರು ದೂರಿದ್ದಾರೆ.

ನ್ಯಾಯಪೀಠವು ಅರ್ಜಿಯ ವಿಚಾರಣೆಯನ್ನು ಏ. 30ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT