ಶುಕ್ರವಾರ, ಮಾರ್ಚ್ 31, 2023
23 °C

ದೆಹಲಿ ಮೇಯರ್‌ ಆಯ್ಕೆ: ಸುಪ್ರೀಂ ಕೋರ್ಟ್‌ನಿಂದ ಫೆ.3ಕ್ಕೆ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನಕ್ಕೆ ಸಕಾಲದಲ್ಲಿ ಚುನಾವಣೆ ನಡೆಸಬೇಕು ಎಂದು ಕೋರಿ ಆಮ್‌ ಆದ್ಮಿ ಪಕ್ಷದ ಮೇಯರ್‌ ಅಭ್ಯರ್ಥಿ ಶೆಲ್ಲಿ ಒಬೆರಾಯ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಫೆ. 3ರಂದು ಕೈಗೆತ್ತಿಕೊಳ್ಳುವುದಾಗಿ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿ ದೀಪಂಕರ್‌ ದತ್ತಾ ಅವರಿದ್ದ ಪೀಠವು ಹೇಳಿದೆ.

ದೆಹಲಿ ಮಹಾನಗರ ಪಾಲಿಕೆ ಸಭೆಯಲ್ಲಿ ಗದ್ದಲ ನಡೆದಿದ್ದರಿಂದ ಕಳೆದ ಮಂಗಳವಾರ ನಡೆಯಬೇಕಿದ್ದ ಮೇಯರ್‌ ಸ್ಥಾನದ ಚುನಾವಣೆ ನಡೆದಿರಲಿಲ್ಲ. ಗದ್ದಲದ ಕಾರಣದಿಂದಾಗಿ ದೆಹಲಿಯ ಲೆಫ್ಟಿನೆಂಟ್ ಗವರ್ನರ್‌ ಅವರಿಂದ ನೇಮಕಗೊಂಡಿದ್ದ ಚುನಾವಣಾ ಅಧಿಕಾರಿಯು ಸಭೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು