ಬುಧವಾರ, ಜನವರಿ 26, 2022
26 °C
ಕೇಂದ್ರ ಸೇವೆಯಿಂದ ವಜಾಗೊಳಿಸಲು ಕೋರಿಕೆ

ನಕಲಿ ಜಾತಿ ಪ್ರಮಾಣಪತ್ರ: ಸಮೀರ್‌ ವಾಂಖೆಡೆ ವಿರುದ್ಧ ಬಾಂಬೆ ಹೈಕೋರ್ಟ್‌ಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿರುವ ಕಾರಣಕ್ಕೆ ಎನ್‌ಸಿಬಿ ಮುಂಬೈ ವಲಯದ ನಿರ್ದೇಶಕ ಸಮೀರ್‌ ವಾಂಖೆಡೆ ಅವರನ್ನು ಕೇಂದ್ರ ಸೇವೆಯಿಂದ ವಜಾಗೊಳಿಸಬೇಕು ಎಂದು ಕೋರಿ ಬಾಂಬೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ಜಾತಿ ಪ್ರಮಾಣಪತ್ರ ಪರಿಶೀಲನಾ ಸಮಿತಿಯು ವಾಂಖೆಡೆ ಅವರ ಜಾತಿ ಮತ್ತು ಧರ್ಮದ ಬಗ್ಗೆ ಪರಿಶೀಲನೆ ನಡೆಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಶೋಕ ಕಾಂಬ್ಳೆ ಅವರು ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಿದ್ದಾರೆ.

ಹಿರಿಯ ವಕೀಲ ನಿತಿನ್‌ ಸತ್ಪುಟೆ ಅವರು ಕಾಂಬ್ಳೆ ಪರವಾಗಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಯುಪಿಎಸ್‌ಸಿ ಮತ್ತು ಕೇಂದ್ರ ಸರ್ಕಾರವನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ವಾಂಖೆಡೆ ಅವರು ತಾನು ಮುಸ್ಲಿಂ ಎನ್ನುವ ಅಂಶವನ್ನು ಮರೆಮಾಚುವ ಮೂಲಕ ಕೆಲಸ ಗಿಟ್ಟಿಸಿಕೊಂಡಿದ್ದಾರೆ. ತಾವು ಹಿಂದೂ ಮತ್ತು ಪರಿಶಿಷ್ಟ ಜಾತಿಗೆ ಸೇರಿದವರು ಎಂದೂ ಹೇಳಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು