ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರಾಧನಾ ಸ್ಥಳಗಳ ಕಾಯ್ದೆ ಸಿಂಧುತ್ವ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

Last Updated 7 ಜೂನ್ 2022, 11:33 IST
ಅಕ್ಷರ ಗಾತ್ರ

ನವದೆಹಲಿ: ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆ) ಕಾಯ್ದೆ 1991ರ ಕೆಲವು ಸೆಕ್ಷನ್‌ಗಳ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ.

ನಿವೃತ್ತ ಸೇನಾ ಅಧಿಕಾರಿ ಅನಿಲ್ ಕಬೋತ್ರಾ ಅವರು ಈ ಅರ್ಜಿ ಸಲ್ಲಿಸಿ, ಕಾಯ್ದೆಯ ಸೆಕ್ಷನ್‌ 2, 3 ಮತ್ತು 4 ಭಾರತದ ಜಾತ್ಯತೀತ ತತ್ವವನ್ನು ಉಲ್ಲಂಘಿಸುತ್ತಿವೆ ಎಂದು ಆರೋಪಿಸಿದ್ದಾರೆ.

ಧಾರ್ಮಿಕ ಸ್ಥಳಗಳ ಯಥಾಸ್ಥಿತಿ ಕಾಯ್ದುಕೊಳ್ಳುವ ಕುರಿತಂತೆ ಕೇಂದ್ರ ಸರ್ಕಾರ ಏಕಪಕ್ಷೀಯವಾಗಿ ಕಟ್‌ ಆಫ್‌ ದಿನಾಂಕವನ್ನು ನಿಗದಿ ಮಾಡಿದೆ. ಅದಕ್ಕಾಗಿ 1947ರ ಆಗಸ್ಟ್‌ 15ರ ದಿನಾಂಕ ಗುರುತು ಮಾಡಿದೆ ಎಂದು ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT