ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಶಾಂತ್‌ ಪ್ರಕರಣ: ವಸ್ತುಸ್ಥಿತಿ ವರದಿ ಕೋರಿ ಪಿಐಎಲ್‌

Last Updated 7 ಡಿಸೆಂಬರ್ 2020, 12:30 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿ ಸಲ್ಲಿಸಲು ಸಿಬಿಐಗೆ ನಿರ್ದೇಶಿಸಬೇಕು ಎಂದು ಸೋಮವಾರ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್‌) ದಾಖಲಾಗಿದೆ.

ವಕೀಲ ಪುನೀತ್ ಧಂಡಾ ಅವರು ಅರ್ಜಿ ಸಲ್ಲಿಸಿದ್ದು, ‘ಆಗಸ್ಟ್‌ 19ರಂದು ಸಿಬಿಐ ವಿಚಾರಣೆಗೆ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿತ್ತು. ನಾಲ್ಕು ತಿಂಗಳು ಕಳೆದರೂ, ಸಿಬಿಐ ತನಿಖೆಯನ್ನು ಪೂರ್ಣಗೊಳಿಸಿಲ್ಲ. ಈ ಪ್ರಕರಣದಲ್ಲಿ ಸಿಬಿಐ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸುತ್ತಿಲ್ಲ ಮತ್ತು ತನಿಖೆ ವಿಳಂಬವಾಗುತ್ತಿದೆ’ ಎಂದು ಅವರು ದೂರಿದ್ದಾರೆ.

ಎರಡು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ, ಅಂತಿಮ ವರದಿಯನ್ನು ಸಂಬಂಧಪಟ್ಟ ನ್ಯಾಯಾಲಯದಲ್ಲಿ ಸಲ್ಲಿಸಲು ಸಿಬಿಐಗೆ ನಿರ್ದೇಶಿಸುವಂತೆ ಅರ್ಜಿಯಲ್ಲಿ ಕೋರಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT