ಗುರುವಾರ , ಮೇ 26, 2022
29 °C

ದ್ವೇಷ ಭಾಷಣ: ನ್ಯಾಯಾಲಯದ ಮೇಲ್ವಿಚಾರಣೆಯ ತನಿಖೆ ಕೋರಿ ‘ಸುಪ್ರೀಂ’ಗೆ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದ ವಿವಿಧೆಡೆ ಪ್ರವಾದಿ ಮೊಹಮ್ಮದ್‌ ಅವರನ್ನು ನಿರಂತರ ಅವಹೇಳನ ಮಾಡುವವರ ವಿರುದ್ಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಕೋರಿ ಜಮಿಯತ್ ಉಲಮಾ-ಇ-ಹಿಂದ್ ಸಂಘಟನೆಯು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ದೇಶದ ವಿವಿಧೆಡೆ ಪ್ರವಾದಿ ಮೊಹಮ್ಮದ್‌ ಅವರನ್ನು ಅವಹೇಳನ ಮಾಡಿರುವ ಮತ್ತು ದ್ವೇಷ ಭಾಷಣ ಮಾಡಿರುವವರ ವಿರುದ್ಧ ಕೈಗೊಂಡಿರುವ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದೂ ಸಂಘಟನೆಯ ಅಧ್ಯಕ್ಷ ಮೌಲಾನ ಸಯ್ಯದ್ ಮಹಮೂದ್‌ ಅಸದ್‌ ಮದನಿ ಅರ್ಜಿಯಲ್ಲಿ ಕೋರಿದ್ದಾರೆ.

ದ್ವೇಷ ಅಪರಾಧ ಪ್ರಕರಣಗಳ ತನಿಖೆಗೆ ಸ್ವತಂತ್ರ ಸಮಿತಿಯೊಂದನ್ನು ರಚಿಸಲು ನಿರ್ದೇಶನ ನೀಡಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು