ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಹಕರ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡುವಂತೆ ಕೋರಿ ಅರ್ಜಿ

Last Updated 29 ಡಿಸೆಂಬರ್ 2020, 9:57 IST
ಅಕ್ಷರ ಗಾತ್ರ

ನವದೆಹಲಿ: ಗ್ರಾಹಕರ ಆಯೋಗದಲ್ಲಿ ಖಾಲಿಯಿರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಈ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರಗಳು ಆಸಕ್ತಿ ತೋರದ ಕಾರಣ ಹಲವು ಪ್ರಕರಣಗಳು ಬಾಕಿ ಉಳಿದಿವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ರಾಜ್ಯ ಮತ್ತು ಜಿಲ್ಲಾ ಗ್ರಾಹಕರ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ವಿವಿಧ ಹೈಕೋರ್ಟ್‌ಗಳು ನೀಡಿದ್ದ ಆದೇಶವನ್ನು ಅಧಿಕಾರಿಗಳು ಕಡೆಗಣಿಸಿದ್ದಾರೆ. ಆಯೋಗದಲ್ಲಿ ಮೂಲಸೌಕರ್ಯಗಳ ಕೊರತೆಯೂ ಇದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಗ್ರಾಹಕರ ಆಯೋಗಕ್ಕೆ ಸಿಬ್ಬಂದಿ ನೇಮಕ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು. ಅಲ್ಲದೆ ಈ ಸಂಬಂಧ ಸಂಪೂರ್ಣ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ಕಾನೂನು ವಿದ್ಯಾರ್ಥಿ ಸಲೋನಿ ಗೌತಮ್‌ ಎಂಬುವರು ಈ ಅರ್ಜಿಯನ್ನು ಸಲ್ಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT