ನವದೆಹಲಿ: ಕೋವಿಡ್ನಿಂದ ಮೃತರಾದವರ ಕುಟುಂಬಕ್ಕೆ ₹4ಲಕ್ಷ ಪರಿಹಾರ ನೀಡಲು ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.

ಪರಿಹಾರ ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳುವ ವ್ಯಕ್ತಿಗೆ ₹4 ಲಕ್ಷ ಪರಿಹಾರ ನೀಡಲು ರಾಜ್ಯ ವಿಪತ್ತು ನಿರ್ವಹಣಾ ನಿಧಿ (ಎಸ್ಡಿಆರ್ಎಫ್) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯನ್ನು (ಎನ್ಡಿಆರ್ಎಫ್) ಬಳಕೆ ಮಾಡುವ ಬಗ್ಗೆ ಕೇಂದ್ರ ಸರ್ಕಾರವು ಪರಿಷ್ಕೃತ ಪಟ್ಟಿಯನ್ನು ಬಿಡುಗಡೆ ಮಾಡಿರುವ ಅಂಶವನ್ನು ವಕೀಲರಾದ ರೀಪಕ್ ಕಾನ್ಸಾಸ್ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಕೇಂದ್ರ ಸರ್ಕಾರವು ಕೋವಿಡ್–19 ಅನ್ನು ರಾಷ್ಟ್ರೀಯ ವಿಪತ್ತು ಎಂದು ಮಾರ್ಚ್ 14ರಂದು ಘೋಷಿಸಿದ್ದು, ವಿಪತ್ತು ನಿರ್ವಹಣಾ ಕಾಯ್ದೆಯ ಸೆಕ್ಷನ್ 12ರ ಅಡಿಯಲ್ಲಿ ಪರಿಹಾರ ಒದಗಿಸಲು ಕನಿಷ್ಠ ಮಾನದಂಡಗಳನ್ನು ಶಿಫಾರಸು ಮಾಡಬೇಕು ಎಂದೂ ಅರ್ಜಿದಾರರು ಕೋರಿದ್ದಾರೆ.

ಕೋವಿಡ್ನಿಂದ ಮೃತರಾದವರ ಮರಣ ಪ್ರಮಾಣ ಪತ್ರವನ್ನು ಅವರ ಕುಟುಂಬದವರಿಗೆ ನೀಡಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬೇಕು ಎಂದೂ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.