ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಲಿಂಗ ವಿವಾಹ ಮತ್ತು ನೋಂದಣಿ: ಕೇಂದ್ರದ ಅಭಿಪ್ರಾಯ ಕೇಳಿದ ದೆಹಲಿ ಹೈಕೋರ್ಟ್‌

Last Updated 14 ಅಕ್ಟೋಬರ್ 2020, 8:33 IST
ಅಕ್ಷರ ಗಾತ್ರ

ನವದೆಹಲಿ: ವಿಶೇಷ ವಿವಾಹ ಕಾಯ್ದೆಯಡಿ ಸಲಿಂಗಿಗಳ ವಿವಾಹ ಮತ್ತು ವಿದೇಶ ವಿವಾಹ ಕಾಯ್ದೆಯಡಿ ಸಲಿಂಗಿಗಳ ವಿವಾಹದ ನೋಂದಣಿ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸುವಂತೆ ದೆಹಲಿ ಹೈಕೋರ್ಟ್‌, ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರಕ್ಕೆ ಸೂಚಿಸಿದೆ.

ವಿಶೇಷ ವಿವಾಹ ಕಾಯ್ದೆಯಡಿ ಮದುವೆಯಾಗಬೇಕೆಂದು ಕೋರಿ ಇಬ್ಬರು ಮಹಿಳೆಯರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ,ನ್ಯಾಯಮೂರ್ತಿ ಆರ್‌.ಎಸ್‌.ಎಂಡ್ಲವ್ ಮತ್ತು ಆಶಾ ಮೆನನ್ ಅವರನ್ನೊಳಗೊಂಡ ಪೀಠವು ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನೋಟಿಸ್ ನೀಡಿದೆ.

ಇನ್ನೊಂದು ಪ್ರಕರಣದಲ್ಲಿ ಇಬ್ಬರು ಪುರುಷರು ಅಮೆರಿಕದಲ್ಲಿ ವಿವಾಹವಾಗಿದ್ದು, ವಿದೇಶಿ ವಿವಾಹ ಕಾಯ್ದೆಯಡಿ ಅವರ ಮದುವೆ ನೋಂದಾಯಿಸಲು ನಿರಾಕರಿಸಲಾಗಿದೆ. ಆ ಪುರುಷರು ಸಲ್ಲಿಸಿದ ಮನವಿಯ ಮೇರೆಗೆ, ನ್ಯಾಯಾಲಯವು ಕೇಂದ್ರ ಸರ್ಕಾರ, ನ್ಯೂಯಾರ್ಕ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ನೋಟಿಸ್‌ ನೀಡಿದೆ. ಪ್ರಕರಣದ ವಿಚಾರಣೆಯನ್ನು 2021ರ ಜನವರಿ 8ಕ್ಕೆ ಮುಂದೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT