ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಧಾನಿ ಕಳವಳ: ಗವರ್ನರ್

Last Updated 4 ಮೇ 2021, 11:28 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿರುವ ಬೆನ್ನಲ್ಲೇ ಹಲವು ಜಿಲ್ಲೆಗಳಿಂದ ಹಿಂಸಾಚಾರದ ಘಟನೆಗಳು ವರದಿಯಾಗಿದ್ದು, ಪ್ರಧಾನಿ ನರೇಂದ್ರ ಮೋದಿ ನನಗೆ ಕರೆ ಮಾಡಿ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ರಾಜ್ಯಪಾಲ ಜಗದೀಪ್‌ ಧನಖಡ್ ಮಂಗಳವಾರತಿಳಿಸಿದ್ದಾರೆ.

ಸೋಮವಾರದಂದು ಬಂಗಾಳದಲ್ಲಿ ವ್ಯಾಪಕ ಹಿಂಸಾಚಾರ ವರದಿಯಾಗಿವೆ. ಅಲ್ಲಲ್ಲಿ ನಡೆದ ಘರ್ಷಣೆಗಳಲ್ಲಿ ಬಿಜೆಪಿ ಕಾರ್ಯಕರ್ತರು ಕೊಲೆಗೀಡಾಗಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ. ಅಂಗಡಿಗಳನ್ನು ಲೂಟಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ವರದಿ ಕೇಳಿದೆ.

ಈ ಕುರಿತು ಟ್ವಿಟರ್‌ನಲ್ಲಿ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಟ್ಯಾಗ್ ಮಾಡಿರುವ ರಾಜ್ಯಪಾಲರು, ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಹದೆಗೆಟ್ಟಿರುವ ಕಾನೂನು ಸುವ್ಯವಸ್ಥೆಯ ಬಗ್ಗೆತೀವ್ರ ಕಳವಳವನ್ನು ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

ಈ ವಿಧ್ವಂಸಕ ಕೃತ್ಯದ ಕುರಿತು ನಾನು ಕಳವಳವನ್ನು ವ್ಯಕ್ತಪಡಿಸುತ್ತೇನೆ. ರಾಜ್ಯದಲ್ಲಿ ಲೂಟಿ ಹಾಗೂ ಹತ್ಯೆಗಳು ಮುಂದುವರಿಯುತ್ತಿದ್ದು, ಕಾನೂನು ಸುವ್ಯವಸ್ಥೆ ಪುನಃಸ್ಥಾಪಿಸಲು ಸಂಬಂಧಪಟ್ಟವರು ಕಾರ್ಯಪ್ರವೃತರಾಗಬೇಕು ಎಂದು ಹೇಳಿದ್ದಾರೆ.

ಮಗದೊಂದು ಟ್ವೀಟ್‌ನಲ್ಲಿ ಪ್ರಜ್ಞಾಶೂನ್ಯ ರಾಜಕೀಯ ಹಿಂಸಾಚಾರ, ವಿಧ್ವಂಸಕ ಕೃತ್ಯ, ಬೆಂಕಿ ಹಚ್ಚುವುದು, ಹತ್ಯೆ ಮತ್ತು ಪ್ರಜಾಪ್ರಭುತ್ವವನ್ನು ಅವಮಾನಗೊಳಿಸುವ ಇಂತಹ ಕೃತ್ಯಗಳನ್ನು ತಡೆಯುವಂತೆ ಪಶ್ಚಿಮ ಬಂಗಾಳ ಪೊಲೀಸರಿಗೆ ಆಗ್ರಹಿಸಿದ್ದಾರೆ.

ವಿಶ್ವದಾದ್ಯಂತ ಬಂಗಾಳಿಗರು ಕಾನೂನುಬಾಹಿರ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಚುನಾವಣೋತ್ತರ ಹಿಂಸಾಚಾರವು ಬಂಗಾಳದಲ್ಲಿ ಮಾತ್ರ ಏಕೆ ನಡೆಯುತ್ತಿದೆ? ಪ್ರಜಾಪ್ರಭುತ್ವದ ಮೇಲೆ ಏಕೆ ಈ ದಾಳಿ? ಎಂದು ಪ್ರಶ್ನಿಸಿದ್ದಾರೆ.

ಬುರ್ದ್ವಾನ್ ಜಿಲ್ಲೆಯಲ್ಲಿ ಭಾನುವಾರ ಹಾಗೂ ಸೋಮವಾರ ಬಿಜೆಪಿ ಹಾಗೂ ಟಿಎಂಸಿ ಕಾರ್ಯಕರ್ತರ ನಡುವೆ ನಡೆದ ಹಿಂಸಾಚಾರದಲ್ಲಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರಲ್ಲಿ ಮೂವರು ತಮ್ಮ ಪಕ್ಷದ ಕಾರ್ಯಕರ್ತರು ಎಂದು ಟಿಎಂಸಿ ಹೇಳಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT