ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳ ಬಲವರ್ಧನೆ ಅಗತ್ಯ: ಪ್ರಧಾನಿ ನರೇಂದ್ರ ಮೋದಿ

ಜಾಗತಿಕ ಸವಾಲುಗಳನ್ನು ಎದುರಿಸಲು ಒಂದಾಗಿ ಶ್ರಮಿಸಬೇಕು ಎಂದು ಮೋದಿ ಕರೆ
Last Updated 24 ಫೆಬ್ರುವರಿ 2023, 9:58 IST
ಅಕ್ಷರ ಗಾತ್ರ

ಬೆಂಗಳೂರು: ಜಾಗತಿಕ ಸವಾಲುಗಳು, ವಿಶೇಷವಾಗಿ ಹವಾಮಾನ ವೈಪರೀತ್ಯಗಳನ್ನು ಸಮರ್ಥವಾಗಿ ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕುಗಳ ಬಲವರ್ಧನೆಯ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಶುಕ್ರವಾರ ನಡೆದ ಜಿ–20 ಸಭೆಯಲ್ಲಿ ತಿಳಿಸಿದರು.

ಜಿ–20ಯ ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆ ಉದ್ದೇಶಿಸಿ ವಿಡಿಯೊ ಭಾಷಣ ಮಾಡಿದ ಮೋದಿ, ಜಾಗತಿಕ ಆರ್ಥಿಕತೆಯಲ್ಲಿ ಸ್ಥಿರತೆ, ವಿಶ್ವಾಸ ಮತ್ತು ಬೆಳವಣಿಗೆಯನ್ನು ಹೊಂದಲು ಗುಂಪುಗಳ ಸಹಕಾರವು ಅತ್ಯಗತ್ಯ ಎಂದು ಹೇಳಿದರು.

ಕಳೆದ ವರ್ಷ ಡಿಸೆಂಬರ್‌ನಲ್ಲಿ ಭಾರತ ಜಿ–20 ಅಧ್ಯಕ್ಷತೆ ವಹಿಸಿಕೊಂಡಿದ್ದು, ಹಲವಾರು ಕಾರ್ಯಕ್ರಮ ಮತ್ತು ಸಮ್ಮೇಳನಗಳನ್ನು ಆಯೋಜಿಸುತ್ತಿದೆ. ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್‌ ಬ್ಯಾಂಕುಗಳ ಸಭೆಯು ಭಾರತ ಅಧ್ಯಕ್ಷತೆಯ ಮೊದಲ ಪ್ರಮುಖ ಸಭೆಯಾಗಿದೆ.

‘ಜಗತ್ತು ಗಂಭೀರ ಆರ್ಥಿಕ ತೊಂದರೆಗಳನ್ನು ಎದುರುಸುತ್ತಿರುವ ಸಮಯದಲ್ಲಿ ಜಾಗತಿಕ ಹಣಕಾಸು ಮತ್ತು ಆರ್ಥಿಕತೆಯ ನಾಯಕತ್ವವನ್ನು ನೀವು ಪ್ರತಿನಿಧಿಸುತ್ತೀರಿ. ಕೋವಿಡ್‌–19 ಸಾಂಕ್ರಾಮಿಕವು ಜಾಗತಿಕ ಆರ್ಥಿಕತೆಗೆ ಭಾರೀ ಹೊಡೆತವನ್ನು ನೀಡಿದೆ. ಅನೇಕ ದೇಶಗಳು, ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ಆರ್ಥಿಕತೆಗಳು ಇನ್ನೂ ಅದರ ಪರಿಣಾಮಗಳನ್ನು ನಿಭಾಯಿಸುತ್ತಿವೆ. ಇದರೊಂದಿಗೆ ಪ್ರಪಂಚದ ವಿವಿಧ ಭಾಗಗಳಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳಿಗೂ ನಾವು ಸಾಕ್ಷಿಯಾಗಿದ್ದೇವೆ‘ ಎಂದು ಮೋದಿ ತಮ್ಮ ಸಂದೇಶವನ್ನು ತಿಳಿಸಿದರು. ವಿಶ್ವದ ಜನಸಂಖ್ಯೆಯು 8 ಶತಕೋಟಿ ದಾಟಿದ್ದರೂ, ಸುಸ್ಥಿರ ಅಭಿವೃದ್ಧಿ ಗುರಿಗಳ ಪ್ರಗತಿಯು ನಿಧಾನವಾಗುತ್ತಿದೆ ಎಂದು ಸಹ ಅವರು ಹೇಳಿದರು.

"ಹವಾಮಾನ ಬದಲಾವಣೆ ಮತ್ತು ಹೆಚ್ಚಿನ ಸಾಲದ ಮಟ್ಟಗಳಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ" ಎಂದು ಮೋದಿ ವಿವರಿಸಿದರು.

ಭಾರತೀಯ ಗ್ರಾಹಕರು ಮತ್ತು ಉತ್ಪಾದಕರು ಭವಿಷ್ಯದ ಬಗ್ಗೆ ಆಶಾವಾದಿ ಮತ್ತು ವಿಶ್ವಾಸ ಹೊಂದಿದ್ದಾರೆ, ‘ನೀವು ಜಾಗತಿಕ ಆರ್ಥಿಕತೆಗೆ ಅದೇ ಸಕಾರಾತ್ಮಕ ಮನೋಭಾವವನ್ನು ರವಾನಿಸಲು ಸಾಧ್ಯವಾಗುತ್ತದೆ ಎಂದು ನಾವು ಭಾವಿಸುತ್ತೇವೆ‘ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT