ಶುಕ್ರವಾರ, ಸೆಪ್ಟೆಂಬರ್ 17, 2021
30 °C

ಕೋವಿಡ್, ಲಸಿಕೆ ಸ್ಥಿತಿಗತಿ ಕುರಿತು ಪ್ರಧಾನಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಕೋವಿಡ್ ಹಾಗೂ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಶುಕ್ರವಾರದಂದು ಉನ್ನತ ಮಟ್ದ ಸಭೆ ನಡೆಸಲಾಯಿತು ಎಂದು ಸರ್ಕಾರಿ ಮೂಲಗಳು ತಿಳಿಸಿದೆ. 

ಪ್ರಧಾನಿ ಮೋದಿ ಅವರು ದೇಶದಲ್ಲಿ ಕೋವಿಡ್ ಸ್ಥಿತಿಗತಿ ಕುರಿತು ಪರಿಶೀಲಿಸಿದರು. ಸಭೆಯಲ್ಲಿ ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಹಾಜರಿದ್ದರು. 

ಇದನ್ನೂ ಓದಿ: 

ದೇಶದಲ್ಲಿ ಕೊರೊನಾ ಪಾಸಿಟಿವಿಟಿ ದರ 35 ಜಿಲ್ಲೆಗಳಲ್ಲಿ ವಾರದಲ್ಲಿ ಶೇಕಡಾ 10ಕ್ಕಿಂತಲೂ ಹೆಚ್ಚು  ವರದಿಯಾಗುತ್ತಿವೆ. 30 ಜಿಲ್ಲೆಗಳಲ್ಲಿ ಈ ಪ್ರಮಾಣ ಶೇಕಡಾ 10ರಷ್ಟಾಗಿದೆ ಎಂದು ಅವರು ಮಾಹಿತಿ ನೀಡಿದರು. 

ದೇಶದಲ್ಲಿ ಇದುವರೆಗೆ 72 ಕೋಟಿ ಲಸಿಕೆ ಡೋಸ್ ನೀಡಲಾಗಿದೆ ಎಂದು ಕೇಂದ್ರ ಸರ್ಕಾರವು ಗುರುವಾರ ತಿಳಿಸಿದೆ. ಈ ಪೈಕಿ ಶೇಕಡಾ 18ರಷ್ಟು ಮಂದಿ ಎರಡು ಡೋಸ್‌ಗಳನ್ನು ಹಾಕಿಸಿಕೊಂಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು