ಸೋಮವಾರ, ಜುಲೈ 4, 2022
21 °C

ಅಮೆರಿಕದ ನೂತನ ಅಧ್ಯಕ್ಷ ಬೈಡನ್‌ಗೆ ಪ್ರಧಾನಿ ಮೋದಿ ಅಭಿನಂದನೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಅಮೆರಿಕದ ನೂತನ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ಜೋ ಬೈಡನ್ ಅವರನ್ನು ಅಭಿನಂದಿಸಿರುವ ಭಾರತ ಪ್ರಧಾನಿ ನರೇಂದ್ರ ಮೋದಿ, ಭಾರತ-ಅಮೆರಿಕ ವ್ಯೂಹಾತ್ಮಕ ಸಹಭಾಗಿತ್ವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಅವರೊಂದಿಗೆ ಕೈಜೋಡಿಸಲು ಬದ್ಧವಾಗಿದ್ದೇವೆ ಎಂದು ತಿಳಿಸಿದರು.

ಅಮೆರಿಕ ಉಪಾಧ್ಯಕ್ಷೆಯಾಗಿ ಪದಗ್ರಹಣ ಮಾಡಿರುವ ಕಮಲಾ ಹ್ಯಾರಿಸ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು. ಅಲ್ಲದೆ ಭಾರತ-ಅಮೆರಿಕ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸಲು ಅವರೊಂದಿಗೆ ಸಂವಹನ ನಡೆಸಲು ಎದುರು ನೋಡುತ್ತಿರುವುದಾಗಿ ತಿಳಿಸಿದರು.

ಭಾರತ-ಅಮೆರಿಕ ಸಹಭಾಗಿತ್ವದಿಂದ ಈ ಜಗತ್ತಿಗೆ ಪ್ರಯೋಜನಕಾರಿಯಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು.

ಅಭೂತಪೂರ್ವ ಭದ್ರತೆಯಲ್ಲಿ ಅಮೆರಿಕದ 46ನೇ ಅಧ್ಯಕ್ಷರಾಗಿ ಜೋ ಬೈಡನ್ ಪ್ರಮಾಣವಚನ ಸ್ವೀಕರಿಸಿದರು. ಈ ಐತಿಹಾಸಿಕ ಸಮಾರಂಭದಲ್ಲಿ ಕಮಲಾ ಹ್ಯಾರಿಸ್ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಪದಗ್ರಹಣ ಮಾಡಿದರು.

ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಜೋ ಬೈಡನ್ ಅವರಿಗೆ ನನ್ನ ಆತ್ಮೀಯ ಅಭಿನಂದನೆಗಳು. ಭಾರತ-ಅಮೆರಿಕದ ವ್ಯೂಹಾತ್ಮಕ ಸಹಭಾಗಿತ್ವವನ್ನು ಗಟ್ಟಿಗೊಳಿಸಲು ಅವರೊಂದಿಗೆ ಕೆಲಸ ಮಾಡುವುದನ್ನು ಎದುರು ನೋಡುತ್ತಿರುವುದಾಗಿ ಮೋದಿ ತಿಳಿಸಿದರು.

ಇದನ್ನೂ ಓದಿ: 

ಅಮೆರಿಕವನ್ನು ಯಶಸ್ವಿಯಾಗಿ ಮುನ್ನಡೆಸಲು ನನ್ನ ಅಭಿನಂದನೆಗಳು. ಸಮಾನ ಸವಾಲುಗಳನ್ನು, ಜಾಗತಿಕ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಲು ನಾವು ಒಗ್ಗಟ್ಟಿನಿಂದ ಎದುರಿಸಬೇಕಿದೆ ಎಂದು ಹೇಳಿದರು.

ಭಾರತ-ಅಮೆರಿಕ ಸಹಭಾಗಿತ್ವವು ಸಮಾನ ಮೌಲ್ಯದ ಹಂಚಿಕೆಯನ್ನು ಆಧರಿಸಿದೆ. ಬೆಳೆಯುತ್ತಿರುವ ಆರ್ಥಿಕತೆ, ಜನರಿಂದ ಜನರಿಗೆ ಸಂಪರ್ಕ ಸೇರಿದಂತೆ ನಾವು ದೃಢವಾದ ದ್ವಿಪಕ್ಷೀಯ ಕಾರ್ಯಸೂಚಿಯನ್ನು ಹೊಂದಿದ್ದೇವೆ. ಭಾರತ-ಅಮೆರಿಕ ಸಹಭಾಗಿತ್ವವನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಕೈಜೋಡಿಸಲು ಬದ್ಧರಾಗಿದ್ದೇವೆ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು