ಮಂಗಳವಾರ, ಜುಲೈ 27, 2021
21 °C
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ

‘ಪ್ರಧಾನಿ ದೇಶದ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ’–ರಾಹುಲ್ ಗಾಂಧಿ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ. ದೇಶದ ಸದ್ಯದ ಪರಿಸ್ಥಿತಿಯನ್ನು ನಾಟಕೀಯವಾಗಿ ಬೇರೆಡೆಗೆ ತಿರುಗಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪಿಸಿದರು.

‘ಇಂದು ಎಂಎಸ್ಎಂಇ ವಲಯದ ಉದ್ಯೋಗದಾತರು ಸ್ವತಃ ನಿರುದ್ಯೋಗ ಎದುರಿಸುತ್ತಿದ್ದಾರೆ. ಮೋದಿಯವರು ದೇಶದ ಭವಿಷ್ಯದೊಂದಿಗೆ ಆಟವಾಡುತ್ತಿದ್ದಾರೆ. ದೇಶದ ಸದ್ಯದ ಪರಿಸ್ಥಿತಿಯನ್ನು ನಾಟಕೀಯವಾಗಿ ಬೇರೆಡೆಗೆ ತಿರುಗಿಸಿದ್ದಾರೆ’ ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮಾಡಿದ್ದಾರೆ.

ಟಾಯ್‌ಕಥಾನ್ -2021ರಲ್ಲಿ ಭಾಗವಹಿಸಿದವರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮೋದಿ ಸಂವಹನ ನಡೆಸಿದರು. ದೇಶದ ಸಾಮರ್ಥ್ಯ, ಕಲೆ, ಸಂಸ್ಕೃತಿ ಮತ್ತು ಸಮಾಜವನ್ನು ಅರ್ಥಮಾಡಿಕೊಳ್ಳಲು ಜಗತ್ತು ಬಯಸಿದೆ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು