ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

71,000 ಜನರಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಲಿದ್ದಾರೆ ಪ್ರಧಾನಿ ಮೋದಿ

Last Updated 19 ಜನವರಿ 2023, 15:22 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರದ ವಿವಿಧ ಇಲಾಖೆಗಳ ಮತ್ತು ಸಂಸ್ಥೆಗಳ ಹಲವಾರು ಹುದ್ದೆಗಳಿಗೆ ಹೊಸದಾಗಿ ಆಯ್ಕೆ ಆಗಿರುವ ಸುಮಾರು 71,000 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ವಿತರಿಸಲಿದ್ದಾರೆ. ಜೊತೆಗೆ, ವಿಡಿಯೊ ಕಾನ್ಫರೆನ್ಸ್‌ ಮೂಲಕ ಅವರನ್ನೆಲ್ಲ ಉದ್ದೇಶಿಸಿ ಮಾತನಾಡಲಿದ್ದಾರೆ.

10 ಲಕ್ಷ ಜನರಿಗೆ ಉದ್ಯೋಗ ನೀಡುವ ನಿಟ್ಟಿನಲ್ಲಿ ಕಳೆದ ವರ್ಷ ಮೋದಿ ಅವರು ಘೋಷಿಸಿದ್ದ ‘ರೋಜ್‌ಗಾರ್‌ ಮೇಳ’ ಅಭಿಯಾನದ ಭಾಗವಾಗಿ ಈ ನೇಮಕಾತಿ ಪತ್ರಗಳನ್ನು ನೀಡಲಾಗುತ್ತಿದೆ.

ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂಬ ಬದ್ಧತೆಯನ್ನು ಮೋದಿ ಅವರು ಹೊಂದಿದ್ದಾರೆ. ಅದನ್ನು ಈಡೇರಿಸುವ ನಿಟ್ಟಿನಲ್ಲಿ ಇಟ್ಟಿರುವ ಹೆಜ್ಜೆ ಇದು. ಇನ್ನೂ ಹೆಚ್ಚು ಉದ್ಯೋಗ ಸೃಷ್ಟಿಸಲು ಮತ್ತು ಯುವಜನರಿಗೆ ಅರ್ಥಪೂರ್ಣ ಅವಕಾಶಗಳನ್ನು ಒದಗಿಸಲು, ಆ ಮೂಲಕ ದೇಶದ ಬೆಳವಣಿಗೆಯಲ್ಲಿ ಅವರು ಭಾಗಿಯಾಗುವಂತೆ ಮಾಡುವ ನಿಟ್ಟಿನಲ್ಲಿ ರೋಜಗಾರ್‌ ಮೇಳವು ಪರಿವರ್ತಕವಾಗಿ ಕೆಲಸ ಮಾಡಲಿದೆ ಎಂದು ಪ್ರಧಾನಿ ಕಚೇರಿಯು ತಿಳಿಸಿದೆ.

ಹೊಸ ನೇಮಕಾತಿಗಳಿಗೆ ದೇಶದಾದ್ಯಂತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದ್ದು, ಅವರು ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಾದ ಕಿರಿಯ ಎಂಜಿನಿಯರ್‌, ರೈಲು ಚಾಲಕರು, ತಂತ್ರಜ್ಞರು, ಇನ್‌ಸ್ಪೆಕ್ಟರ್‌, ಸಬ್‌ ಇನ್‌ಸ್ಪೆಕ್ಟರ್‌, ಕಾನ್‌ಸ್ಟೆಬಲ್‌, ಸ್ಟೆನೊಗ್ರಾಫರ್‌ಗಳು, ವೈದ್ಯರು, ಪರಿಚಾರಕರು, ಆದಾಯ ತೆರಿಗೆ ಇನ್‌ಸ್ಪೆಕ್ಟರ್‌ಗಳು, ಶಿಕ್ಷಕರು ಮುಂತಾದ ಉದ್ಯೋಗಗಳಿಗೆ ಆಯ್ಕೆ ಆಗಿದ್ದಾರೆ.

ಸರ್ಕಾರದ ವಿವಿಧ ಹುದ್ದೆಗಳಿಗೆ ನೇಮಕವಾಗುವವರಿಗೆ ಆನ್‌ಲೈನ್‌ ಮೂಲಕ ನೀಡಲಾಗುವ ‘ಕರ್ಮಯೋಗಿ ಪ್ರಾರಂಭ’ ತರಬೇತಿಯನ್ನು ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮದ ವೇಳೆ ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT