ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಲಸಿಕೆ: ಮೂರು ತಂಡಗಳೊಂದಿಗೆ ಮೋದಿ ಮಾತುಕತೆ

Last Updated 30 ನವೆಂಬರ್ 2020, 19:35 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ಲಸಿಕೆಯ ಅಭಿವೃದ್ಧಿ ಮತ್ತು ತಯಾರಿಕೆ ಕಾರ್ಯದಲ್ಲಿ ತೊಡಗಿರುವ ಮೂರು ತಂಡಗಳ ಸದಸ್ಯರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವರ್ಚುವಲ್‌ ಸಭೆ ನಡೆಸಿದರು.

‘ಜನರಿಗೆ ಸುಲಭವಾಗಿ ಅರ್ಥವಾಗುವ ಭಾಷೆಯಲ್ಲೇ ಲಸಿಕೆ ಹಾಗೂ ಅದರ ಪರಿಣಾಮದ ಕುರಿತ ಮಾಹಿತಿ ಒದಗಿಸಲು ಪ್ರಯತ್ನಿಸಬೇಕೆಂದು ಅವರು ಎಲ್ಲರಿಗೂ ಸೂಚಿಸಿದ್ದಾರೆ’ ಎಂದು ಪ್ರಧಾನಿ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

‘ಇಡೀ ವಿಶ್ವವೇ ಕೋವಿಡ್‌ ವಿರುದ್ಧ ಸಮರ ಸಾರಿದೆ. ದೇಶ ವಾಸಿಗಳೆಲ್ಲಾ ಲಸಿಕೆಯನ್ನು ಎದುರು ನೋಡುತ್ತಿದ್ದಾರೆ. ಈ ಮೂರು ಕಂಪನಿಗಳ ಉದ್ದೇಶ ಫಲಪ್ರದವಾಗಬೇಕಾದರೆ ಎಲ್ಲಾ ತಂಡದವರು ದಕ್ಷತೆಯಿಂದ ಕೆಲಸ ಮಾಡಬೇಕು. ಕಂಪನಿಗಳು ಹಾಗೂ ಅದರ ಪ್ರತಿನಿಧಿಗಳು ತಮ್ಮ ಆಲೋಚನೆಗಳನ್ನು ನಮ್ಮೊಂದಿಗೆ ಮುಕ್ತವಾಗಿ ಹಂಚಿಕೊಳ್ಳಬೇಕು’ ಎಂದೂ ಮೋದಿ ಸಲಹೆ ನೀಡಿದ್ದಾಗಿ ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಕೋವಿಡ್‌–19 ಲಸಿಕೆ ಕಂಡುಹಿಡಿಯಲು ಮೂರು ಕಂಪನಿಗಳ ವಿಜ್ಞಾನಿಗಳು ಶ್ರಮಿಸುತ್ತಿದ್ದು, ಅವರ ಕಾರ್ಯದ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಲಸಿಕೆ ಸಂಗ್ರಹ, ಸರಬರಾಜು ಹಾಗೂ ಸಾಗಾಣೆ ಪ್ರಕ್ರಿಯೆ ಸೇರಿದಂತೆ ಇನ್ನಿತರ ಹಲವು ವಿಷಯಗಳ ಬಗ್ಗೆಯೂ ಅವರು ಚರ್ಚಿಸಿದ್ದಾರೆ’ ಎಂದೂ ಪ್ರಕಟಣೆ ವಿವರಿಸಿದೆ.

ಪುಣೆಯ ಗಿನೊವಾ ಬಯೋಫಾರ್ಮಾಸ್ಯುಟಿಕಲ್‌ ಲಿಮಿಟೆಡ್‌, ಹೈದರಾಬಾದ್‌ನ ಬಯಾಲಜಿಕಲ್‌ ಇ ಲಿಮಿಟೆಡ್‌ ಮತ್ತು ಡಾ.ರೆಡ್ಡಿ ಲ್ಯಾಬೊರೇಟರಿಯ ವಿಜ್ಞಾನಿಗಳು ಹಾಗೂ ಇತರ ಸಿಬ್ಬಂದಿ ಲಸಿಕೆ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.

ಮೋದಿ ಅವರು ಕೆಲ ದಿನಗಳ ಹಿಂದೆ ಅಹಮದಾಬಾದ್‌ನಲ್ಲಿರುವ ಜೈಡಸ್‌ ಕೆಡಿಲಾ ಸಂಸ್ಥೆ, ಹೈದರಾಬಾದ್‌ನ ಭಾರತ್‌ ಬಯೊಟೆಕ್‌ ಸಂಸ್ಥೆ ಹಾಗೂ ಪುಣೆಯ ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಸಂಸ್ಥೆಯ ಸಂಶೋಧನಾ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಅಭಿವೃದ್ಧಿಯಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT