ನಂತರ ಪಶ್ಚಿಮಬಂಗಾಳಕ್ಕೆ ತೆರಳಲಿರುವ ಪ್ರಧಾನಿ, ಅಲ್ಲಿನ ಹೂಗ್ಲಿಯಲ್ಲಿ ಅನೇಕ ರೈಲ್ವೆ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ.ನೊಪಾರದಿಂದ ದಕ್ಷಿಣೇಶ್ವರ ವಿಸ್ತರಣಾ ಮೆಟ್ರೋ ಮಾರ್ಗದ ಸೇವೆಗೆ ಚಾಲನೆ ನೀಡಲಿದ್ದಾರೆ. 4.1 ಕಿ.ಮೀ ಉದ್ದದ ಈ ಮಾರ್ಗವನ್ನು ₹464 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಸಂಪೂರ್ಣ ಕೇಂದ್ರ ಅನುದಾನದಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಪ್ರಧಾನಿ ಕಾರ್ಯಾಲಯ ಹೇಳಿದೆ.