ಶನಿವಾರ, ಸೆಪ್ಟೆಂಬರ್ 18, 2021
22 °C

ಪಿಎಂ ಕಿಸಾನ್ ಯೋಜನೆಯ ಮೊತ್ತ ಪ್ರಧಾನಿ ಮೋದಿಯಿಂದ ಇಂದು ಬಿಡುಗಡೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನಮಂತ್ರಿ ಕಿಸಾನ್‌ ಸಮ್ಮಾನ್‌ ಯೋಜನೆಯ (ಪಿಎಂ ಕಿಸಾನ್) ಕಂತಿನ ಮೊತ್ತವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 12.30ಕ್ಕೆ ಬಿಡುಗಡೆ ಮಾಡಲಿದ್ದಾರೆ.

‘₹19,500 ಕೋಟಿಗೂ ಹೆಚ್ಚಿನ ಮೊತ್ತವು 9.75 ಕೋಟಿಗೂ ಹೆಚ್ಚು ಫಲಾನುಭವಿಗಳ ಖಾತೆಗೆ ವರ್ಗಾವಣೆಯಾಗಲಿದೆ. ಪ್ರಧಾನಿಯವರು ರೈತ ಫಲಾನುಭವಿಗಳ ಜತೆ ಸಂವಾದ ನಡೆಸಲಿದ್ದು, ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ’ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಓದಿ: 

ಯೋಜನೆಯಡಿ ಫಲಾನುಭವಿಗಳಿಗೆ ವರ್ಷಕ್ಕೆ ₹6,000 ದೊರೆಯುತ್ತಿದೆ. ಮೂರು ಕಂತುಗಳಲ್ಲಿ ₹2,000 ಹಣ ಬಿಡುಗಡೆ ಮಾಡಲಾಗುತ್ತಿದೆ. ಇದು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆಯಾಗುತ್ತದೆ.

ಈ ಹಿಂದಿನ ಕಂತನ್ನು ಮೇ 14ರಂದು ಪ್ರಧಾನಿ ವಿಡಿಯೊ ಕಾನ್ಫರೆನ್ಸ್ ಮೂಲಕ ಬಿಡುಗಡೆ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು