ಬುಧವಾರ, ಸೆಪ್ಟೆಂಬರ್ 30, 2020
23 °C

ಕಸಮುಕ್ತ ಭಾರತ ಅಭಿಯಾನಕ್ಕೆ ಮೋದಿ ಚಾಲನೆ

‍ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಕೊರೊನಾ ಸೋಂಕು ವಿರುದ್ಧದ ಹೋರಾಟಕ್ಕೆ ಸ್ವಚ್ಛ ಭಾರತ ಅಭಿಯಾನವು ದೊಡ್ಡ ಬೆಂಬಲವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ತಿಳಿಸಿದರು. 

ರಾಷ್ಟ್ರೀಯ ಸ್ವಚ್ಛತಾ ಕೇಂದ್ರವನ್ನು ಉದ್ಘಾಟಿಸಿದ ಪ್ರಧಾನಿ, ಕಸಮುಕ್ತ ಭಾರತ ಅಭಿಯಾನದ ಸಪ್ತಾಹಕ್ಕೆ ಚಾಲನೆ ನೀಡಿದರು. 

ಇದೇ ವೇಳೆ ಅವರು, ವಿವಿಧ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಪ್ರತಿನಿಧಿಸುವ 36 ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. 

ಕೊರೊನಾ ಸೋಂಕು ಕಡಿವಾಣಕ್ಕೆ ಅಂತರವನ್ನು ಕಾಯ್ದುಕೊಳ್ಳುವ ಜೊತೆಗೆ ಮುಖಗವಸು ಧರಿಸುವಂತೆ ಮಕ್ಕಳಿಗೆ ಸಲಹೆ ನೀಡಿದರು.  

‘ಈ ಕೇಂದ್ರವು, ಸ್ವಚ್ಛತೆಯ ಪ್ರತೀಕವಾಗಿದ್ದ ಮಹಾತ್ಮ ಗಾಂಧಿ ಅವರಿಗೆ ಸಲ್ಲಿಸುತ್ತಿರುವ ಗೌರವವಾಗಿದೆ’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು