ಶುಕ್ರವಾರ, 8 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಭಿವೃದ್ಧಿಶೀಲ ರಾಷ್ಟ್ರಗಳ ನೆರವಿಗೆ ‘ಆರೋಗ್ಯ ಮೈತ್ರಿ’: ಮೋದಿ ಘೋಷಣೆ

ನೈಸರ್ಗಿಕ ವಿಕೋಪ, ಮಾನವೀಯ ಬಿಕ್ಕಟ್ಟು ಸಂದರ್ಭಗಳಲ್ಲಿ ವೈದ್ಯಕೀಯ ನೆರವು ಯೋಜನೆ
Last Updated 13 ಜನವರಿ 2023, 19:31 IST
ಅಕ್ಷರ ಗಾತ್ರ

ನವದೆಹಲಿ: ನೈಸರ್ಗಿಕ ವಿಕೋಪಗಳು ಅಥವಾ ಮಾನವೀಯ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಭಾರತವು ಅಗತ್ಯ ವೈದ್ಯಕೀಯ ನೆರವು ಒದಗಿಸುವ ‘ಆರೋಗ್ಯ ಮೈತ್ರಿ’ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಘೋಷಿಸಿದ್ದಾರೆ.

ಈ ದೇಶಗಳ ಸಮಸ್ಯೆಗಳ ಪರಿಹಾರಕ್ಕಾಗಿ ‘ಉತ್ಕೃಷ್ಟತಾ ಕೇಂದ್ರ’ವನ್ನೂ ಸ್ಥಾಪಿಸಲಾಗುವುದು ಎಂದೂ ಅವರು ಹೇಳಿದ್ದಾರೆ.

‘ವಾಯ್ಸ್ ಆಫ್ ಗ್ಲೋಬಲ್ ಸೌತ್ ವರ್ಚುವಲ್’ ಶೃಂಗಸಭೆಯ ಮುಕ್ತಾಯದ ಅಧಿವೇಶನದಲ್ಲಿ ಮಾತನಾಡಿದ ಅವರು, ‘ಭಾರತವು ತನ್ನ ಪರಿಣತಿಯನ್ನು ಇತರ ಅಭಿವೃದ್ಧಿಶೀಲ ರಾಷ್ಟ್ರಗಳೊಂದಿಗೆ ಹಂಚಿಕೊಳ್ಳಲು ‘ವಿಜ್ಞಾನ ಮತ್ತು ತಂತ್ರಜ್ಞಾನ ಉಪಕ್ರಮ’ವನ್ನು ಪ್ರಾರಂಭಿಸುತ್ತದೆ ಎಂದು ಹೇಳಿದ್ದಾರೆ.

‘ಅಭಿವೃದ್ಧಿಶೀಲ ರಾಷ್ಟ್ರಗಳ ವಿದ್ಯಾರ್ಥಿಗಳು ಭಾರತದಲ್ಲಿ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ‘ಗ್ಲೋಬಲ್ ಸೌತ್ ಸ್ಕಾಲರ್‌ಶಿಪ್’ ಅನ್ನೂ ಸ್ಥಾಪಿಸಲಾಗುವುದು ಎಂದು ಮೋದಿ ಇದೇ ಸಂದರ್ಭದಲ್ಲಿ ಪ್ರಕಟಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT