ನವದೆಹಲಿ: ಸುಗಮವಾಗಿ ಸದನ ನಡೆಯಲು ಸರ್ವಪಕ್ಷಗಳು ಸಹಕಾರ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ಪಕ್ಷಗಳಲ್ಲಿ ಮನವಿ ಮಾಡಿದರು.

ಬುಧವಾರದಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಸದನ ಆರಂಭವಾಗುವುದಕ್ಕೂ ಮುನ್ನ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.

ಎಲ್ಲಾ ಪಕ್ಷಗಳು ಕಲಾಪವನ್ನು ಸುಗಮವಾಗಿ ನಡೆಯಲು ಸಹಕರಿಸಬೇಕು ಎಂದರು. ಯುವ ಸಂಸದರಿಗೆ ಸದನದಲ್ಲಿ ಮಾತನಾಡಲು ಎಲ್ಲಾ ಪಕ್ಷಗಳು ಹೆಚ್ಚಿನ ಕಾಲಾವಕಾಶ ನೀಡಬೇಕು ಎಂದು ಕೋರಿದರು.

ಎಲ್ಲಾ ಪಕ್ಷಗಳು ಯುವ ಸದಸ್ಯರಿಗೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಚರ್ಚೆಗಳಲ್ಲಿ ಭಾಗವಹಿಸಲು ಅವಕಾಶ ನೀಡಬೇಕು ಎಂದು ಪ್ರಧಾನಿ ಹೇಳಿದರು.

ಜಿ–20 ಬಗ್ಗೆ ಪ್ರಸ್ತಾಪಿಸಿ ಮಾತನಾಡಿದ ಪ್ರಧಾನಿಗಳು, ಭಾರತದ ನಾಯಕತ್ವವು ಕೇವಲ ರಾಜತಾಂತ್ರಿಕ ಕಾರ್ಯಕ್ರಮವಲ್ಲ, ಬದಲಿಗೆ ದೇಶದ ಶಕ್ತಿಯನ್ನು ಜಗತ್ತಿಗೆ ಪ್ರದರ್ಶಿಸುವ ಅವಕಾಶವಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.