ಶನಿವಾರ, ಸೆಪ್ಟೆಂಬರ್ 18, 2021
24 °C

ಭಾರತಕ್ಕೆ ಬರಲು ಇಚ್ಛಿಸುವ ಸಿಖ್‌, ಹಿಂದೂಗಳಿಗೆ ಆಶ್ರಯಕ್ಕೆ ಮೋದಿ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತಕ್ಕೆ ಬರಲು ಇಚ್ಛಿಸುವ ಅಫ್ಗಾನಿಸ್ತಾನದ ಸಿಖ್‌ ಹಾಗೂ ಹಿಂದೂಗಳಿಗೆ ಆಶ್ರಯ ನೀಡಲು ಕ್ರಮ ಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಿಗಳಿಗೆ ಮಂಗಳವಾರ ಸೂಚನೆ ನೀಡಿದರು.

ತಾಲಿಬಾನ್‌ ಅಟ್ಟಹಾಸದಿಂದಾಗಿ ಅಫ್ಗಾನಿಸ್ತಾನದಲ್ಲಿ ಉದ್ಭವಿಸಿರುವ ಪ್ರಕ್ಷುಬ್ಧ ಪರಿಸ್ಥಿತಿ ಹಿನ್ನೆಲೆಯಲ್ಲಿ ನಡೆದ ರಾಷ್ಟ್ರೀಯ ಭದ್ರತೆ ಮೇಲಿನ ಸಂಪುಟ ಸಮಿತಿಯ ಉನ್ನತ ಮಟ್ಟದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

‘ಅಫ್ಗಾನಿಸ್ತಾನದಲ್ಲಿ ಸಿಲುಕಿರುವ ಎಲ್ಲ ಭಾರತೀಯರನ್ನು ಸುರಕ್ಷಿತವಾಗಿ ಕರೆದುಕೊಂಡು ಬರಬೇಕು. ಸಹಾಯಕ್ಕಾಗಿ ಭಾರತದತ್ತ ಮುಖ ಮಾಡಿರುವ ಆ ದೇಶದ ಸಹೋದರ, ಸಹೋದರಿಯರಿಗೆ ಸಾಧ್ಯವಿರುವ ಎಲ್ಲ ನೆರವು ನೀಡಬೇಕು’ ಎಂದರು.

ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ಡೋಭಾಲ್‌, ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ, ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್‌ ಶೃಂಗ್ಲಾ, ಅಫ್ಗಾನಿಸ್ತಾನದಲ್ಲಿನ ಭಾರತ ರಾಯಭಾರಿ ರುದ್ರೇಂದ್ರ ಟಂಡನ್ ಸಭೆಯಲ್ಲಿ ಪಾಲ್ಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು