ಶನಿವಾರ, ಡಿಸೆಂಬರ್ 4, 2021
20 °C

ಕೇಶವಾನಂದ ಶ್ರೀಗಳ ನಿಧನಕ್ಕೆ ಪ್ರಧಾನಿ ಸಂತಾಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಎಡನೀರು ಮಠದ ಕೇಶವಾನಂದ ಭಾರತಿ ಸ್ವಾಮೀಜಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

‘ದೀನದಲಿತರ ಸಬಲೀಕರಣಕ್ಕಾಗಿ ಮತ್ತು ಸಮುದಾಯದ ಸೇವೆಗಾಗಿ ಪೂಜ್ಯ ಕೇಶವಾನಂದ ಭಾರತಿ ಸ್ವಾಮೀಜಿ ಅವರನ್ನು ನಾವು ಸದಾ ನೆನೆಯುತ್ತೇವೆ. ಅವರು ಭಾರತದ ಶ್ರೀಮಂತ ಸಂಸ್ಕೃತಿ ಮತ್ತು ಶ್ರೇಷ್ಠ ಸಂವಿಧಾನದೊಂದಿಗೆ ಅವಿನಾಭಾವ ಸಂಬಂಧ ಹೊಂದಿದ್ದರು. ಸ್ವಾಮೀಜಿ ಅವರು ಸದಾ ನಮ್ಮ ನೆನಪಿನಲ್ಲಿರುತ್ತಾರೆ.ಮುಂದಿನ ತಲೆಮಾರುಗಳಿಗೆ ಸ್ಫೂರ್ತಿಯಾಗಿರುತ್ತಾರೆ. ಓಂ ಶಾಂತಿ‘ ಎಂದು ಪ್ರಧಾನಿಯವರು ಟ್ವೀಟ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು